ಪರ್ಯಾಯ ಸಂವಿಧಾನದ ಸಂಸತ್ತಿನ ಮುಂದೆ ತರುವ ಪ್ರಯತ್ನಕ್ಕೆ ಮನುವಾದಿಗಳಿಗೆ ಧಿಕ್ಕಾರ.!

ದಾವಣಗೆರೆ.01.ಫೆ.25: ದೇಶದಲ್ಲಿ ಪರ್ಯಾಯ ಸವಿಧಾನ್ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾರತದ ಏಕತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಪರ್ಯಾಯ ಸಂವಿಧಾನದ ಕರಡನ್ನು ಸಿದ್ಧಪಡಿಸಿ, ಅದನ್ನು ಸಂಸತ್ತಿನ ಮುಂದೆ ತರುವ ಪ್ರಯತ್ನಕ್ಕೆ ಮುಂದಾಗಿರುವ ಮನುವಾದಿಗಳಿಗೆ ಧಿಕ್ಕಾರವಿರಲಿ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅಗಡಿ ಕಿಡಿಕಾರಿದರು.

ನಗರದ ಜಾಗತಿಕ ಲಿಂಗಾಯತ ಮಹಾಸಭಾ, ಜಾಗೃತ ಭಾರತ ವಿಚಾರ ವೇದಿಕೆ, ಶರಣ ಸಾಹಿತ್ಯ ಪರಿಷತ್ತು, ತಾಲ್ಲೂಕು ಘಟಕ ಹಾಗೂ ಬಸವಪರ, ದಲಿತಪರ, ಪ್ರಗತಿಪರ ಸಂಘಟನೆಗಳ ವೇದಿಕೆಯ ಪದಾಧಿಕಾರಿಗಳು ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಪರ್ಯಾಯ ಸಂವಿಧಾನ ರಚನೆಗೆ ಸಿದ್ದವಾಗಿರುವವರ ವಿರುದ್ಧ ಪ್ರತಿಭಟನೆ ನಡೆಸಿದರು.

ಮೂಲಭೂತವಾದಿಗಳು ಒಂದು ಧರ್ಮವನ್ನು ಮುಂದಿಟ್ಟುಕೊಂಡು ನಡೆಸುತ್ತಿರುವ ಸಂವಿಧಾನ ಬದಲಾವಣೆಗೆ ಮುಂದಾಗಿರುವ ಈ ಕ್ರಮವು ಭಾರತದ ಸಂವಿಧಾನಕ್ಕೆ ಮಾಡಿದ ಅಪಮಾನವಾಗಿದ್ದು, ಇವರ ಈ ನಡೆಯು ಭಾರತದ ಕಾನೂನಿನ ಉಲ್ಲಂಘನೆ ಮಾತ್ರವಲ್ಲದೆ ದೇಶದ್ರೋಹಿ ಕೃತ್ಯವೂ ಆಗಿರುತ್ತದೆ ಎಂದು ಜಾಗೃತ ಭಾರತ ವಿಚಾರ ವೇದಿಕೆ ಸಂಚಾಲಕ ಡಾ.ಕೆ.ಎ.ಓಬಳೇಶ್ ಆಕ್ರೋಶವ್ಯಕ್ತಪಡಿಸಿದರು.

ಸಂವಿಧಾನ ವಿರೋಧಿ ಕೃತ್ಯವನ್ನು ದಾವಣಗೆರೆ ಜಿಲ್ಲೆಯ ಎಲ್ಲಾ ಪ್ರಗತಿಪರ ಸಂಘಟನೆಗಳು ಅತ್ಯಂತ ಉಗ್ರವಾಗಿ ಖಂಡಿಸುತ್ತಿದ್ದು, ಇದು ಹೀಗೆ ಮುಂದುವರೆದರೆ ಇದರ ವಿರುದ್ಧ ದೇಶವ್ಯಾಪ್ತಿ ಉಗ್ರ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ರುದ್ರೇ ಗೌಡ ಅವರು ಎಚ್ಚರಿಕೆ ನೀಡಿದರು.

ನಂತರ ಎಲ್ಲಾ ಸಂಘಟನೆಯ ಪದಾಧಿಕಾರಿಗಳು ಡಿಸಿ ಕಚೇರಿಗೆ ತೆರಳಿ ಮನವಿಸಲ್ಲಿಸಿದರು.

ಭಾರತ್ ದೇಶದಲ್ಲಿ ಪರ್ಯಾಯ ಸವೀಧಾನ್ ಕೂಗು ಕೇಳಿಬಂದಿದೆ ಈಗಾಗಲೇ ರಾಷ್ಟ್ರಾದ್ಯಂತ ವಿವಿಧ ಭಾಗಗಳಲ್ಲಿ ಸಂಘಟನೆಗಳು ವಿರೋಧ್ ವ್ಯಕ್ತಪಡಿಸಿತಿದ್ದಾರೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

6 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

6 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

6 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

6 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

6 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

6 hours ago