15000 ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ .ಸಚಿವ ಎನ್.ಮಧು ಬಂಗಾರಪ್ಪ.!

ತುಮಕೂರು.02.ಫೆ.25. ರಾಜ್ಯದಲ್ಲಿ ಸರ್ಕಾರ 15000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿತು ಅದರೆ ಇನು ಅದೇ ರೀತಿ ಹೇಳುತ್ಬರ್ತಿದೆ.ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾ ಗಿದೆಯಲ್ಲದೆ ಹೊಸದಾಗಿ 15000 ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂ ದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎನ್.ಮಧು ಬಂಗಾರಪ್ಪ ತಿಳಿಸಿದರು.

ಜಿಲ್ಲಾ ಪಂಚಯತಿ ಸಭಾಂಗಣದಲ್ಲಿ ಶನಿವಾರ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕೊರತೆ ನೀಗಿ ಸಲು ಹೊಸದಾಗಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಖಾಲಿಯಿರುವ ಶಿಕ್ಷಕರ ಹುದ್ದೆ ಳನ್ನು ಹಂತ-ಹಂತವಾಗಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಿಸಲು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಶಾಲೆಗಳಲ್ಲಿದ್ದ ನ್ಯೂನ್ಯತೆಗಳನ್ನು ಸರಿಪಡಿಸಲಾಗಿದೆ. ಶಾಲೆಗಳಿಗೆ ಹೆಚ್ಚಿನ ಸಂಖ್ಯೆ ಯಲ್ಲಿ ವಿಜ್ಞಾನ ಲ್ಯಾಬ್‌ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದರಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತದೆ.

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಮಧ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ ಪುಸ್ತಕ, ಶೂ, ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆಯಲ್ಲದೆ, ಶಾಲೆಗಳನ್ನು ಕೆಪಿಎನ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಇದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಆಸಕ್ತಿ ತೋರು ತ್ತಿದ್ದಾರೆ ಎಂದರು.

ಪ್ರಸಕ್ತ ವರ್ಷದಲ್ಲಿ ಪದವಿಪೂರ್ವ ಕಾಲೇಜು ಗಳನ್ನೂ ಸಹ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಪದವಿಪೂರ್ವ ಕಾಲೇಜು ಗಳಿಗೂ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುವುದೆಂದರು. ಜಿಲ್ಲೆಯಲ್ಲಿ ಶತಮಾನ ಕಂಡ ಶಾಲೆಗಳನ್ನೂ ಸಹ ಅಭಿವೃದ್ಧಿಪಡಿಸಲಾಗುವುದು. ವಿಶೇಷ ಅನುದಾನದಡಿ ಶತಮಾನ ಕಂಡ ಶಾಲೆಗಳು ಮುಂದಿನ ಪೀಳಿಗೆಗೆ ಮಾದರಿಯಾಗುವಂತ ಉಳಿಸಿಕೊಂಡು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯ ಕ್ರಮದಡಿ ತಾವು ಓದಿದ ಶಾಲೆಗಳ ಅಭಿವೃದ್ಧಿಗೆ ಹಲವಾರು ದಾನಿಗಳು ಆರ್ಥಿಕ ನೆರವು ನೀಡಲು ಮುಂದೆ ಬರುತ್ತಿದ್ದಾರೆ. ಶಾಲಾ ಪೀಠೋ ಪಕರಣ, ಲೇಖನ ಸಾಮಗ್ರಿ, ಸ್ಮಾರ್ಟ್ ತರಗತಿ ನಿರ್ಮಾಣಕ್ಕೆ ಸಹಾಯಹಸ್ತ ನೀಡುತ್ತಿದ್ದಾರೆ.

ಅಲ್ಲದೆ ಈ ಕಾರ್ಯಕ್ರಮಕ್ಕೆ ಸಿಎಸ್‌ಆರ್ ನಿಧಿಯಿಂದ 1591 ಕೋಟಿ ರೂ.ಗಳನ್ನು ಸದ್ವಿನಿಯೋಗಿಸಲಾಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳೂ ಸಹ ತಾವು ಓದಿದ ಶಾಲೆಗಳ ಅಭಿವೃದ್ಧಿಗಾಗಿ ಕೊಡುಗೆಯನ್ನು ನೀಡಲು ಸಂಕಲ್ಪ ಮಾಡಬೇಕು ಎಂದು ತಿಳಿಸಿದರು. ಸಭೆಯಲ್ಲಿ ಶಾಸಕ ಸುರೇಶ್ ಗೌಡ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹ ಣಾಧಿಕಾರಿ ಜಿ.ಪ್ರಭು, ಡಿಡಿಪಿಐಗಳಾದ ಮನ ಮೋಹನ ಹಾಗೂ ಗಿರಿಜಾ, ಡಯಟ್ ಪ್ರಾಂಶುಪಾಲ ಮಂಜುನಾಥ, ಬಾಲಗುರುಮೂರ್ತಿ ಇತರರಿದ್ದರು.

prajaprabhat

Recent Posts

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

28 minutes ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

35 minutes ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

2 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

11 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

14 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

14 hours ago