458 ಸಹಾಯಕ ‍ಪ್ರಾಧ್ಯಾಪಕರಿಗೆ ಯುಜಿಸಿ ವಿದ್ಯಾರ್ಹತೆ ಇಲ್ಲ ವರದಿ ಬಹಿರಂಗ!

ಬೆಂಗಳೂರು.18.ಜನವರಿ.25.ಕರ್ಣಾಟಕ ಸರ್ಕಾರ ಉನ್ನತ ಶಿಕ್ಷಣ ಇಲಾಖೆ ಅನುದಾನಿತ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗ ನಿಗದಿಪಡಿಸಿದ ವಿದ್ಯಾರ್ಹತೆಯ ನಿಯಮಗಳನ್ನು ಮೀರಿ ಉನ್ನತ ಶಿಕ್ಷಣ ಇಲಾಖೆ 459 ಸಹಾಯಕ ಪ್ರಾಧ್ಯಾಪಕರನ್ನು ನೇಮಕ ಮಾಡಿಕೊಂಡಿದ್ದು, ಅಂಥವರಿಗೆ ಯುಜಿಸಿ ವೇತನಶ್ರೇಣಿ ನೀಡುತ್ತಿರುವುದಕ್ಕೆ ಮಹಾಲೇಖಪಾಲರ ವರದಿ ಆಕ್ಷೇಪ ವ್ಯಕ್ತಪಡಿಸಿದೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ 2007-08ನೇ ಸಾಲಿನಲ್ಲಿ ಹಾಗೂ ಇತರೆ ವರ್ಷಗಳಲ್ಲಿ ಅನುದಾನಿತ ಕಾಲೇಜುಗಳು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ಯುಜಿಸಿ ನಿಯಮಕ್ಕೆ ವಿರುದ್ಧವಾಗಿ ಎಂ.ಫಿಲ್‌ ಪೂರೈಸಿದ್ದ ಅಭ್ಯರ್ಥಿಗಳನ್ನೂ ನೇಮಕ ಮಾಡಿಕೊಂಡಿವೆ.

ಸರ್ಕಾರಿ ಕಾಲೇಜುಗಳಲ್ಲಿ 225 ಮತ್ತು ಅನುದಾನಿತ ಕಾಲೇಜುಗಳಲ್ಲಿ 234 ಅಭ್ಯರ್ಥಿಗಳು ಯುಜಿಸಿ ನಿಗದಿಪಡಿಸಿದ ಅರ್ಹತೆ ಹೊಂದಿಲ್ಲ ಎನ್ನುವುದನ್ನು ಲೆಕ್ಕ ಪರಿಶೋಧನಾ ವರದಿ ಉಲ್ಲೇಖಿಸಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕರಾಗಿ ಕೆಲಸ ಮಾಡುವವರು ಸ್ನಾತಕೋತ್ತರ ಪದವಿಯ ಜತೆಗೆ ಎನ್‌ಇಟಿ ಇಲ್ಲವೇ ಕೆ-ಸೆಟ್‌ ತೇರ್ಗಡೆಯಾಗಿರಬೇಕು, ಪಿಎಚ್‌.ಡಿ ಪಡೆದಿರಬೇಕು.

’74 ಸರ್ಕಾರಿ ಹಾಗೂ 21 ಅನುದಾನಿತ ಸಂಸ್ಥೆಗಳಲ್ಲಿ ಯುಜಿಸಿ ನಿಗದಿತ ವಿದ್ಯಾರ್ಹತೆ ಇಲ್ಲದ ಸಹಾಯಕ ಪ್ರಾಧ್ಯಾಪಕರು ಕೆಲಸ ಮಾಡುತ್ತಿದ್ದಾರೆ. ಪಟ್ಟಿ ತರಿಸಿಕೊಳ್ಳಲಾಗಿದ್ದು, ಪರಿಶೀಲನೆ ನಡೆಸಲಾಗುತ್ತದೆ. ನಂತರ ಮುಂದಿನ ಕ್ರಮಕ್ಕೆ ಸರ್ಕಾರಕ್ಕೆ ಕಳುಹಿಸಲಾಗುವುದು’ ಎಂದು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

9 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

9 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

9 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

9 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

10 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

10 hours ago