5ನೇ ರಾಜ್ಯ ಹಣಕಾಸು ಆಯೋಗದಅಧ್ಯಕ್ಷರು ಹಾಗೂ ಸದಸ್ಯರುಗಳು ಬೀದರ ಜಿಲ್ಲೆಗೆ ಭೇಟಿ ನಡೆಸಲಿದ್ದಾರೆ .!


ಬೀದರ.14.ಜನವರಿ.25: ಬೀದರ ಜಿಲ್ಲೆಗೆ 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು (ಸಂಪುಟ ದರ್ಜೆ ಸಚಿವರ ಸ್ಥಾನಮಾನ) ಮತ್ತು ಸದಸ್ಯರುಗಳು ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಾಂಸ್ಥಿಕ ರಚನೆ, ಕಾರ್ಯಚಟುವಟಿಕೆಗಳು, ಆರ್ಥಿಕ ಸ್ಥಿತಿ, ಸಂಪನ್ಮೂಲಗಳ ಕ್ರೋಢೀಕರಣ, ಹಂಚಿಕೆ ಮತ್ತು ಮೂಲ ಸೌಕರ್ಯ ಹಾಗೂ ಸೇವೆಗಳ ಒದಗಿಸುವಿಕೆಯಲ್ಲಿ ತಾಂತ್ರಿಕ ಕೌಶಲ್ಯ, ಸಾಮಥ್ರ್ಯ ಇತ್ಯಾದಿಗಳನ್ನು ಅಧ್ಯಯನ ಮಾಡುತ್ತಿರುವುದರಿಂದ ಜನವರಿ. 17 ಮತ್ತು 18 ರಂದು ಬೀದರ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.


ಪ್ರವಾಸ ಕಾರ್ಯಕ್ರಮ ವಿವರ:  ಅವರು ಜನವರಿ.17 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬೀದರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಬೀದರ ಜಿಲ್ಲೆಯ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

(ಬೆಳಿಗ್ಗೆ 10.30 ರಿಂದ 12 ರವರೆಗೆ ಅಧಿಕಾರಿಗಳಿಂದ ವಿಷಯ ಮಂಡನೆ (ಪಿಪಿಟಿ ಮೂಲಕ), ಮಧ್ಯಾಹ್ನ 12 ರಿಂದ 1.30 ರವರೆಗೆ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚೆ). ನಂತರ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಬೀದರ ನಗರಸಭೆ ಭೇಟಿ ನೀಡಿ ಚುನಾಯಿತಿ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.


ಜನವರಿ.18 ರಂದು ಬೆಳಿಗ್ಗೆ 10 ರಿಂದ 12 ರವರೆಗೆ ಭಾಲ್ಕಿ ಪುರಸಭೆಗೆ ಭೇಟಿನೀಡಿ ಅಲ್ಲಿನ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಲ ಜೊತೆ ಚರ್ಚೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 12 ರಿಂದ 1.30 ರವರೆಗೆ ಭಾಲ್ಕಿ ತಾಲ್ಲೂಕಿನ ಒಂದು ಗ್ರಾಮ ಪಂಚಾಯಿತ  ಭೇಟಿ (ಬೀದರ್ ಮಾರ್ಗ ಮಧ್ಯ) ನೀಡಿ ಅಲ್ಲಿನ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.

ನಂತರ ಮಧ್ಯಾಹ್ನ 3 ರಿಂದ 4.30 ರವರೆಗೆ ಬೀದರ ಜಿಲ್ಲಾ ಪಂಚಾಯತಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆಂದು ಅವರು ತಿಳಿಸಿದ್ದಾರೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

3 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

3 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

3 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

3 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

4 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

6 hours ago