ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ.ಯಾವುದೇ ಕಾರಣಕ್ಕೂ ಒಂದು ದಿನದ ಮಟ್ಟಿಗೆ ಮುಷ್ಕರ ನಡೆಸಬಾರದೆಂದು ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದ ಹಿನ್ನಲೆಯಲ್ಲಿ ಸಾರಿಗೆ ನೌಕರರು ಕರೆ ಕೊಟ್ಟಿದ್ದ ಅನಿರ್ಧಿಷ್ಟಾವಧಿ ಮುಷ್ಕರ ಡೋಲಾಯಮಾನವಾಗಿದೆ.
ನಾಳೆ 5 ಆಗಸ್ಟ್ ರಿಂದ ಮುಂಜಾನೆ 6 ಗಂಟೆಯಿಂದ ರಾಜ್ಯಾದ್ಯಂತ 23 ಸಾವಿರ ಬಸ್ ಸಂಚಾರದಲ್ಲಿ ವ್ಯತ್ಯಯ ಆಗಲಿದೆ.
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಾರಿಗೆ ನಿಗಮಗಳು ಮಂಗಳವಾರದಿಂದ ಕರೆ ಕೊಟ್ಟಿದ್ದ ಮುಷ್ಕರದ ಹಿನ್ನೆಲೆಯಲ್ಲಿ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಮುಷ್ಕರ ನಡೆಸುವುದರಿಂದ ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ಥಗೊಳ್ಳಲಿದೆ.
ಇದರಿಂದ ನಾಗರಿಕರ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತದೆ. ಇದಕ್ಕೆ ಅವಕಾಶ ಕೊಡಬಾರದು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಇಂದು ಮಧ್ಯಾಹ್ನ 2:30 ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ.
ಬೆಂಗಳೂರು: ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ನಾಳೆಯಿಂದ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ನಾಳೆ ಬೆಳಿಗ್ಗೆ 6 ಗಂಟೆಯಿಂದಲೇ ಅನಿವರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದು, ಕೆಎಸ್‌ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳಿಂದ ಒಟ್ಟು 23 ಸಾವಿರ ಬಸ್ ಗಳು ರಸ್ತೆಗಿಳಿಯುವುದು ಅನುಮಾನ ಎನ್ನಲಾಗಿದ್ದು, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಆ.5ರಿಂದ ಕರೆ ನೀಡಿರುವ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ನಿರ್ಧಾರವಾಗಲಿದೆ. ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.5ರಂದು ಬೆಳಗ್ಗೆ 6 ಗಂಟೆಯಿಂದ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಮುಷ್ಕರ ಹೂಡುವುದಾಗಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದು, ನಾಳೆ ನಾಲ್ಕೂ ನಿಗಮಗಳಿಂದ ಒಟ್ಟು 23000 ಬಸ್ಗಳು ರಸ್ತೆಗಿಳಿವುದು ಅನುಮಾನವಾಗಿದ್ದು, 1.2 ಲಕ್ಷ ಕಾರ್ಮಿಕರು ಹೋರಾಟ ನಡೆಸಲಿದ್ದಾರೆ.
ಆಗಸ್ಟ್ 5 ರಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸ್ತಬ್ದವಾದರೆ ಖಾಸಗಿ ವಾಹನ ಬಳಕೆ ಸಿದ್ಧತೆ ನಡೆಸಲಾಗಿದೆ.
ನಾಳೆಯಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸ್ತಬ್ದವಾದರೆ ಖಾಸಗಿ ವಾಹನ ಬಳಕೆ ಸಿದ್ಧತೆ ನಡೆಸಲಾಗಿದೆ. ಮುಷ್ಕರದ ಹಿನ್ನೆಲೆಯಲ್ಲಿ ಖಾಸಗಿ ಬಸ್, ಮಿನಿ ಬಸ್, ಮ್ಯಾಕ್ಸಿಕ್ಯಾಬ್, ಆಟೋ ಮೂಲಕ ಸೇವೆ ನೀಡಲಾಗುವುದು. ಸಾರಿಗೆ ಸಿಬ್ಬಂದಿ ಮುಷ್ಕರದಲ್ಲಿ ಭಾಗಿಯಾದರೆ ಪ್ರಯಾಣಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಶಾಲಾ ವಾಹನಗಳನ್ನು ಸಾರಿಗೆ ಸೇವೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ.
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…