ಬೆಂಗಳೂರು.06.ಜೂನ್.25:- ಇಂದು ರಾಜ್ಯ ಸರ್ಕಾರ 5 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಐದು (5) ಮಂದಿ ಐಪಿಎಸ್ IPS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿಯಾಗಿ ಆರ್. ಹಿತೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.
ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಎಸ್. ಮುರುಗನ್, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಕೆ.ವಿ. ಶರತ್ ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.
ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಪ್ರಸಾರ ಇಲಾಖೆಗೆ ವರ್ಗಾಯಿಸಲಾಗಿದೆ. ಎಸ್. ರವಿ ಅವರನ್ನು ಗುಪ್ತಚರ ಎಡಿಜಿಪಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
