59ಸಾವಿರ ಪ್ರಾಥಮಿಕ  ಶಾಲಾ ಶಿಕ್ಷಕರಿಗೆ ಶೀಘ್ರವೇ ಹೈಸ್ಕೂಲ್‌ಗೆ ಭಡ್ತಿ?

ಬೆಂಗಳೂರು.15.ಅಪ್ರಿಲ್.25:- TCH ಟಿಸಿಎಚ್‌ ಓದಿ 2016ಕ್ಕೂ ಮೊದಲು ನೇಮಕಗೊಂಡ ಪ್ರಾಥಮಿಕ ಶಾಲಾ ಶಿಕ್ಷಕರನ್ನು 2017ರ ವೃಂದ ಮತ್ತು ನೇಮಕಾತಿ ನಿಯಮಗಳಂತೆ 1 ರಿಂದ 5ನೇ ವರ್ಗಕ್ಕೆ ಸೀಮಿತಗೊಳಿಸಿ ಪೂರ್ವಾನ್ವಯಗೊಳಿಸುವುದು ಸರಿಯಾದ ಕ್ರಮವಲ್ಲ ಎಂದು ಕಾನೂನು ಇಲಾಖೆ ಅಭಿಪ್ರಾಯಪಟ್ಟಿದ್ದು, ಇದರಿಂದಾಗಿ 2016ಕ್ಕಿಂತ ಮೊದಲು ನೇಮಕಗೊಂಡು ಸೇವೆ ಸಲ್ಲಿಸುತ್ತಿರುವ 59 ಸಾವಿರ ಪ್ರಾಥಮಿಕ ಶಿಕ್ಷಕರು ಸೇವಾ ಹಿರಿತನ, ಪದವಿ ವಿದ್ಯಾರ್ಹತೆಯೊಂದಿಗೆ ಪ್ರೌಢ ಶಾಲಾ ಶಿಕ್ಷಕರಾಗಿ ಭಡ್ತಿ ಪಡೆಯುವ ದಿನಗಳು ಸನ್ನಿಹಿತವಾಗಿವೆ.

2016ರ ಹಿಂದಿನ ವೃಂದ ಮತ್ತು ನೇಮಕಾತಿ ನಿಯಮಗಳ ಪ್ರಕಾರ 1ರಿಂದ 8ನೇ ತರಗತಿಗೆ ಪ್ರಾಥಮಿಕ ಶಿಕ್ಷಕರ ವೃಂದ (ಪಿಎಸ್‌ಟಿ)ಕ್ಕೆ ನೇಮಕಗೊಳ್ಳುವ ಶಿಕ್ಷಕರಿಗೆ ಅವರ ಸೇವಾ ಹಿರಿತನ ಮತ್ತು ಪದವಿ ವಿದ್ಯಾರ್ಹತೆ ಆಧಾರದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರಾಗಿ ಭಡ್ತಿ ಪಡೆಯಲು ಅವಕಾಶವಿತ್ತು. ಆದರೆ ಸರಕಾರ 2017ರಲ್ಲಿ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರೂಪಿಸಿ ಮೊದಲಿದ್ದ 1-8ನೇ ಮೂಲ ವೃಂದವನ್ನು 1-5 ಮತ್ತು 6-8 ಎಂದು ಎರಡು ವೃಂದಗಳಲ್ಲಿ ವಿಭಾಗಿಸಿತ್ತು. ಜತೆಗೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹೈಸ್ಕೂಲ್‌ ಸಹ ಶಿಕ್ಷಕರಾಗಿ ಭಡ್ತಿ ಹೊಂದುವ ಅವಕಾಶವನ್ನು ಮೊಟಕುಗೊಳಿಸಲಾಗಿತ್ತು.

ಪ್ರಾಥಮಿಕ ಶಿಕ್ಷಕರನ್ನು (1-7/8) ಒಂದರಿಂದ ಐದನೇ ತರಗತಿಗೆ ಸೀಮಿತಗೊಳಿಸಿರುವುದು ಹಿಂಭಡ್ತಿ ನೀಡಿದಂತೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ನಮಗೆ ನಮ್ಮ ನೇಮಕಾತಿ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಅರ್ಹತೆ ಆಧಾರದಲ್ಲಿ ಹೈಸ್ಕೂಲ್‌ ಶಿಕ್ಷಕರಾಗಿ ಭಡ್ತಿ ನೀಡಬೇಕು ಎಂದು ಆಗ್ರಹಿಸಿದ್ದರು.

ಸರಕಾರದ ನಡೆಯನ್ನು ಶಿಕ್ಷಕರು ಕೆಎಟಿಯಲ್ಲಿ ಪ್ರಶ್ನಿಸಿದಾಗ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಿಂದ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಭಡ್ತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸರಕಾರಕ್ಕೆ 2021ರಲ್ಲೇ ನಿರ್ದೇಶನ ನೀಡಿತ್ತು. ಹೈಕೋರ್ಟ್‌ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹಶಿಕ್ಷಕರ ವೃಂದಕ್ಕೆ ಭಡ್ತಿ ನೀಡಲು 2026ರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ಕೈಗೊಳ್ಳುವಂತೆ ಕಳೆದ ಆಗಸ್ಟ್‌ನಲ್ಲಿ ನಿರ್ದೇಶನ ನೀಡಿತ್ತು.

ಈ ಹಿನ್ನೆಲೆಯಲ್ಲಿ 2016ರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಲು ಕರಡು ವೃಂದ ಮತ್ತು ನೇಮಕಾತಿ ನಿಯಮವನ್ನು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿತ್ತು. ಈ ಕರಡು ನಿಯಮಗಳಿಗೆ 75 ಸಾವಿರಕ್ಕೂ ಹೆಚ್ಚು ಸಲಹೆ ಮತ್ತು ಆಕ್ಷೇಪಣೆಗಳು ಸ್ವೀಕೃತವಾಗಿವೆ.

ಜಿಪಿಟಿ ಶಿಕ್ಷಕ ಹುದ್ದೆ
ಜಿಪಿಟಿ ಶಿಕ್ಷಕ ಹುದ್ದೆಗೆ ಪದನಾಮೀಕರಣ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ರಚಿಸಲಾಗಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರ ನೇತೃತ್ವದ ಸಮಿತಿಯು ಕಾನೂನು ಇಲಾಖೆ, ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಆರ್ಥಿಕ ಇಲಾಖೆಗೆ ಅಭಿಪ್ರಾಯ ಕೋರಿ ಬರೆದಿತ್ತು.

ತಾನು ಕೇಳಿದ ಕಡತಗಳನ್ನು ಶಾಲಾ ಶಿಕ್ಷಣ ಇಲಾಖೆ ಒದಗಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರೂ ಇಡೀ ಪ್ರಕರಣವನ್ನು ಪರಿಗಣಿಸಿ ತನ್ನ ಅಭಿಪ್ರಾಯ ನೀಡುವುದಾಗಿ ಹೇಳಿ ಕಾನೂನು ಇಲಾಖೆಯು ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

“ಯಾವುದೇ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ ಅನ್ವಯವಾಗಲಿದ್ದು, ಪ್ರಸ್ತುತ ಪ್ರಕರಣದಲ್ಲಿ 2017ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಗೊಂಡ ಶಿಕ್ಷಕರಿಗೆ ಪೂರ್ವಾನ್ವಯಗೊಳಿಸುವುದು ಸರಿಯಾದ ಕ್ರಮವಲ್ಲ. ಪ್ರತಿಯೊಬ್ಬ ನೌಕರನಿಗೂ ಸದರಿ ನೌಕರನು ನೇಮಕಗೊಂಡ ಸಮಯದಲ್ಲಿ ಜಾರಿಯಲ್ಲಿದ್ದ ನಿಯಮ ಅನ್ವಯಿಸಬೇಕು’ ಎಂದು ಅಭಿಪ್ರಾಯ ಪಟ್ಟಿದೆ.

1.53 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರು
ರಾಜ್ಯದಲ್ಲಿ 1.53 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರಿದ್ದಾರೆ. ಈ ಪೈಕಿ ಸರಕಾರದ ಆದೇಶದಿಂದಾಗಿ 1,13,164 ಶಿಕ್ಷಕರಿಗೆ ಹಿಂಭಡ್ತಿಯಾದಂತೆ ಆಗಿದೆ. ಈ ಹಿನ್ನೆಲೆಯಲ್ಲಿ ನಾವು ಹೋರಾಟ ಮಾಡಿದ್ದೆವು.

ಸರಕಾರದ ಧೋರಣೆಯಿಂದ ಹಲವು ಶಿಕ್ಷಕರು ಭಡ್ತಿ ಇಲ್ಲದೆ ನಿವೃತ್ತಿ ಹೊಂದುವಂತಾಗಿದೆ. ಈಗ ಕಾನೂನು ಇಲಾಖೆಯ ಅಭಿಪ್ರಾಯ ನಮಗೆ ಹೊಸ ಶಕ್ತಿ ತಂದಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹೇಳುತ್ತಾರೆ.

ಕರಡು ನಿಯಮಗಳಿಗೆ ಸ್ವೀಕೃತವಾಗಿರುವ ಸಲಹೆ ಹಾಗೂ ಆಕ್ಷೇಪಣೆಗಳನ್ನು ನಿಯಮಾನುಸಾರ ಪರಿಶೀಲಿಸಿ ಅಂತಿಮ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ಬಳಿಕ ಪಿಎಸ್‌ಟಿ ಹಾಗೂ ಜಿಪಿಟಿ ಶಿಕ್ಷಕರಿಗೆ ಪ್ರೌಢ ಶಾಲಾ ಸಹ ಶಿಕ್ಷಕರ ವೃಂದಕ್ಕೆ ಭಡ್ತಿ ನೀಡಲು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು.
– ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ

ಶಾಲಾ ಶಿಕ್ಷಕಗೆ ಮುಖ್ಯ ಗುರು ಹುದ್ದೆ ಮತ್ತು ಪ್ರೌಢಶಾಲಾ ಸಹ ಶಿಕ್ಷಕರ ಹು¨ªೆ ಎಂಬ ಎರಡು ಭಡ್ತಿಗಳು ಮಾತ್ರ ಲಭ್ಯವಿವೆ. ಈಗ ಕಾನೂನು ಇಲಾಖೆ ನೀಡಿದ ಅಭಿಪ್ರಾಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರಂತರ ಹೋರಾಟಕ್ಕೆ ಶಕ್ತಿ ತುಂಬಿದೆ.

ಶೀಘ್ರವೇ ಸರಕಾರ 2017ಕ್ಕಿಂತ ಮೊದಲು ನೇಮಕಾತಿ ಸಂದರ್ಭದಲ್ಲಿದ್ದ ನಿಯಮಗಳಂತೆ ಭಡ್ತಿ ನೀಡಬೇಕು, ಪದವಿ ಪಡೆದ 58 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಒಂದು ವೇತನ ಭಡ್ತಿ ನೀಡಿ, ಉನ್ನತ ವ್ಯಾಸಂಗ ಪಡೆದವರಿಗೆ ನ್ಯಾಯ ದೊರಕಿಸಬೇಕು.
– ನಾಗೇಶ್‌, ಅಧ್ಯಕ್ಷ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

2 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

2 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

3 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

4 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

5 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

5 hours ago