Home » ಲೈವ್ ನ್ಯೂಸ್ » 6ನೇ ತರಗತಿ ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

6ನೇ ತರಗತಿ ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ.18.ಜನವರಿ.26:- 2026-27ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಡಾ:ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಉಚಿತ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸೇವಾ ಸಿಂಧು ಪೋರ್ಟಲ್‍ನಲ್ಲಿ (https://sevasindhuservices.karnataka.gov.in) ಆನ್‍ಲೈನ್ ಮೂಲಕ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-02-2026 ಆಗಿರುತ್ತದೆ. ಆಸಕ್ತರು  ನೇರವಾಗಿ ಈ ಕೆಳಕಂಡ ವಸತಿ ಶಾಲೆಗಳಿಗೆ ಸಂಪರ್ಕಿಸಿ ಅರ್ಜಿಗಳನ್ನು ಉಚಿತವಾಗಿ ಸಲ್ಲಿಸಬಹುದಾಗಿರುತ್ತದೆ.


ಹೆಚ್ಚಿನ ಮಾಹಿತಿಗಾಗಿ: ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಕಪಲಾಪುರ-ಎ ತಾ:ಜಿ:ಬೀದರ (9663444521), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಂಬಳಗಿ ತಾ:ಜಿ:ಬೀದರ (9740112049), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಮಿಲಾಪುರ (ಬೀದರ ನಗರ) ತಾ:ಜಿ:ಬೀದರ (9036546535), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬುಳ್ಳಾ ಕಾಲೇಜು ಆವರಣ ಹುಮನಾಬಾದ ತಾ:ಹುಮನಾಬಾದ ಜಿ:ಬೀದರ (9886238765), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಿ.ಬಿ ಕಾಲೇಜು ಎದುರುಗಡೆ ಭಾಲ್ಕಿ ತಾ:ಭಾಲ್ಕಿ ಜಿ:ಬೀದರ (9242352031), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಸವಕಲ್ಯಾಣ ತಾ:ಬಸವಕಲ್ಯಾಣ ಜಿ:ಬೀದರ (9663444521) ಪ್ರಾಂಶುಪಾಲರಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology