|

6ನೇ ತರಗತಿ ಪ್ರವೇಶಕ್ಕೆ ಸೀಟು ಹಂಚಿಕೆ ಮೇ.30ಕ್ಕೆ

ಬೀದರ.29.ಮೇ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2025-26ನೇ ಸಾಲಿನ 6ನೇ ತರಗತಿ ಪ್ರವೇಶಾತಿ ಪರೀಕ್ಷೆಯನ್ನು ಈಗಾಗಲೆ ನಡೆಸಿದ್ದು, ಸದರಿ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರುವ ವಿದ್ಯಾರ್ಥಿಗಳ ಪಟ್ಟಿಯನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್‍ನಲ್ಲಿ ಹಾಗೂ ಜಿಲ್ಲಾ ಕಛೇರಿಯ ಸೂಚನಾ ಫಲಕದಲ್ಲಿಯೂ ಪ್ರಕಟಿಸಲಾಗಿರುತ್ತದೆ. 


ಕಾರಣ ಆಯ್ಕೆ ಪಟ್ಟಿಯಲ್ಲಿರುವ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್ ಮೂಲಕ ಸೀಟು ಹಂಚಿಕೆ ಮಾಡಲು ದಿನಾಂಕ:30-05-2025 ರಂದು ಬೆಳಗ್ಗೆ 8:00 ಗಂಟೆಗೆ ಜಿಲ್ಲಾ ಕಛೇರಿ ಸಭಾಂಗಣ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ ಭವನ ಚಿಕ್ಕಪೇಟ ರಿಂಗ್ ರಸ್ತೆ, ಬಂಜಾರಾ ಭವನ ಹತ್ತಿರ ಬೀದರ ಇಲ್ಲಿಗೆ ಹಾಜರಾಗಲು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Similar Posts

Leave a Reply

Your email address will not be published. Required fields are marked *