|

6ನೇ ತರಗತಿ ಪ್ರವೇಶಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ ಏ.27ಕ್ಕೆ

ಬೀದರ.20.ಏಪ್ರಿಲ್.25: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಲೆ ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2025-26ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪಡೆಯಲು ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು

ದಿನಾಂಕ : 27-04-2025 ರಂದು ಬೆಳಿಗ್ಗೆ 11 :00 ಗಂಟೆಯಿoದ ಮಧ್ಯಾಹ್ನ 1 :00 ಗಂಟೆಯವರೆಗೆ ಜ್ಞಾನ ಸುಧಾ ವಿದ್ಯಾಲಯ ಮಾಮನಕೇರಿ ಬೀದರ, ಸಿದ್ದಾರ್ಥ ಸಂಯುಕ್ತ ಪದವಿ ಪೂರ್ವ ಶಿಕ್ಷಣ ಸಂಸ್ಥೆ ಜನವಾಡ ರಸ್ತೆ ಬೀದರ ಹಾಗೂ ವಿದ್ಯಾರಣ್ಯ ಪ್ರೌಢ ಶಾಲೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಜನವಾಡ ರಸ್ತೆ ಶಾಲೆಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದೆಂದು ಬೀದರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್  https://dom.karnataka.gov.in  ನಲ್ಲಿ ಅನ್‌ಲೈನ್ ಮೂಲಕ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಜಿಲ್ಲಾ ಕಛೇರಿ ಮತ್ತು ತಾಲ್ಲೂಕು ಕಛೇರಿಗಳನ್ನು ಅಥವಾ ಬೀದರ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳಾದ ಉಮೇಶ ಮೊಬೈಲ್ : 9448844387, ಹುಮನಾಬಾದ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳಾದ ಶಿವಕುಮಾರ ಮೊಬೈಲ್ : 6361879744ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *