Home » ಲೈವ್ ನ್ಯೂಸ್ » 650ಕ್ಕೂ ಅಧಿಕ ಜನರಿಂದ ನೋಂದಣಿ.
ಎಸ್.ಐ.ಆರ್. ಕಾರ್ಯ ಯಶಸ್ವಿಗೆ ಸಹಕರಿಸಿ: ಜಿಲ್ಲಾಧಿಕಾರಿ ಪೂವಿತಾ ಎಸ್.

650ಕ್ಕೂ ಅಧಿಕ ಜನರಿಂದ ನೋಂದಣಿ.
ಎಸ್.ಐ.ಆರ್. ಕಾರ್ಯ ಯಶಸ್ವಿಗೆ ಸಹಕರಿಸಿ: ಜಿಲ್ಲಾಧಿಕಾರಿ ಪೂವಿತಾ ಎಸ್.

Facebook
X
WhatsApp
Telegram


* ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಯುವ ಜನರು, ಸಾರ್ವಜನಿಕರು ಭಾಗಿ
* ಮ್ಯಾರಥಾನ್ ಓಟ, ಸೈಕ್ಲೋಥಾನ್ ಕಾರ್ಯಕ್ರಮಕ್ಕೆ ವಿವಿಧ ಗಣ್ಯರಿಂದ ಚಾಲನೆ

ರಾಯಚೂರು.09.ಜುಲೈ .26: ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಯಚೂರು ಮಹಾನಗರ ಪಾಲಿಕೆ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ–2026ರ ಹಾಗೂ ನಗರ ಸ್ವಚ್ಛತೆ ಮತ್ತು ಘನತ್ಯಾಜ್ಯ ನಿರ್ವಹಣೆಯ ಹೊಸ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಸದೃಢ ದೇಹ – ಸ್ವಚ್ಛ ಸಮಾಜ – ಬಲಿಷ್ಠ ಪ್ರಜಾಪ್ರಭುತ್ವಕ್ಕಾಗಿ ಜುಲೈ 09ರ ಗುರುವಾರ ದಂದು ರಾಯಚೂರು ನಗರದಲ್ಲಿ ಮ್ಯಾರಥಾನ್ ಓಟ ಹಾಗೂ ಸೈಕ್ಲೋಥಾನ್ ನಡೆಯಿತು.


ರಾಯಚೂರು ನಗರದ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು ಸೇರಿದಂತೆ ಇತರೆ ಹಲವಾರು ಜನರು ಭಾಗಿಯಾಗಲು ಬೆಳಗಿನ ಸಮಯದಲ್ಲಿ ನಗರದ ಮಹಾತ್ಮ ಗಾಂಧೀಜಿ ಜಿಲ್ಲಾ ಕ್ರೀಡಾಂಗಣದಲ್ಲಿ ಬಂದು ಸೇರಿದ್ದರು.
ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಮ್ಯಾರಾಥಾನಗೆ ಹಸಿರು ಬಾವುಟ ತೋರುತ್ತಿದ್ದಂತೆ ಸ್ಪರ್ಧಾಳುಗಳು ನಾಮುಂದೆ ತಾಮುಂದೆ ಎನ್ನುವಂತೆ ಓಟ ಆರಂಭಿಸಿದರು.


ರಾಯಚೂರು ಜಿಲ್ಲಾ ಕ್ರೀಡಾಂಗಣದಿoದ ಓಟ ಆರಂಭಿಸಿದ ಸ್ಪರ್ಧಾಳುಗಳು ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ತೀನ್ ಕಂದಿಲ್, ಮಹಾವೀರ ವೃತ್ತ, ಚಂದ್ರಮೌಳೇಶ್ವರ ವೃತ್ತ ಹಾಗೂ ಬಸವೇಶ್ವರ ವೃತ್ತ ಮಾರ್ಗವಾಗಿ ಮರಳಿ ಕ್ರೀಡಾಂಗಣಕ್ಕೆ ಬಂದು ಸೇರಿದರು.
ಈ ಓಟದಲ್ಲಿ ಪುರುಷರ ವಿಭಾಗದಲ್ಲಿ ತಾಯಪ್ಪ ನಾಯಕ ಪ್ರಥಮ ಬಹುಮಾನ, ನರಸಿಂಹಲು ದ್ವಿತೀಯ ಬಹುಮಾನ ಮತ್ತು ನರಸಿಂಹಲು ವಡವಟ್ಟಿ ತೃತೀಯ ಬಹುಮಾನ ಗಿಟ್ಟಿಸಿ ಗೆಲುವಿನ ನಗೆ ಬೀರಿದರು.

ಮಹಿಳಾ ವಿಭಾಗದಲ್ಲಿ ಮಹೇಶ್ವರಿ ಪ್ರಥಮ, ನಂದಿತಾ ರಾಯಚೂರು ದ್ವಿತೀಯ ಹಾಗೂ ಪದ್ಮವತಿ ಅವರು ತೃತೀಯ ಬಹುಮಾನ ಪಡೆದುಕೊಂಡು ಸಂತಷ ವ್ಯಕ್ತಪಡಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಮಾತನಾಡಿ, ಜಿಲ್ಲೆಯಲ್ಲಿ ಎಸ್.ಐ.ಆರ್‌ಗೆ ವೇಗ ನೀಡಲು ಜಿಲ್ಲಾಡಳಿತ ಸೇರಿದಂತೆ ವಿವಿಧ ಇಲಾಖೆಯ ಸಂಯೋಗದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಪ್ರತಿಯೊಬ್ಬ ಮತದಾರರು ಜಿಲ್ಲಾಡಳಿತದೊಂದಿಗೆ ಕೈಜೋಡಿಸುವ ಮೂಲಕ ಎಸ್.ಐ.ಆರ್. ಪ್ರಕ್ರಿಯೆ ಯಶಸ್ವಿಗೆ ಸಹಕಾರಿಸಬೇಂಕು ಸಾರ್ವಜನಿಕರಲ್ಲಿ ಕೋರಿದರು.

ಜಿಲ್ಲೆಯಲ್ಲಿ ಎಸ್.ಐ.ಆರ್ ಪ್ರಕ್ರಿಯೆವು ಪ್ರಾರಂಭವಾಗಿ 8 ರಿಂದ 10 ದಿನಗಳಾಗಿದ್ದು, ಶೇ.90ಕ್ಕಿಂತ ಹೆಚ್ಚು ಗಣತಿ ನಮೂನೆಗಳನ್ನು ಮತದಾರರಿಗೆ ನೀಡಲಾಗಿದೆ. ಮತ್ತೆ ಅದನ್ನು ಮರಳಿ ಪಡೆಯಲು ಹಾಗೂ ಆನ್‌ಲೈನ್ ನೋಂದಣಿ ಮಾಡುವ ಕೆಲಸವಾಗುತ್ತಿದ್ದು, ಸಾರ್ವಜನಿಕರು ಅರ್ಜಿಗಳನ್ನು ಭರ್ತಿ ಮಾಡಿ ನಿಗದಿತ ಸಮಯದಲ್ಲಿ ಸಂಬoಧಿಸಿದ ಬಿಎಲ್‌ಒ ಅಧಿಕಾರಿಗಳಿಗೆ ನೀಡಬೇಕು. ಬಿಎಲ್‌ಒಗಳು ತಮ್ಮ ಮನೆಗೆ ಬಂದಾಗ ಸಾರ್ವಜನಿಕರು ಅವರಿಗೆ ಸಹಕಾರ ನೀಡಬೇಕೆಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಮಾತನಾಡಿ, ಜಿಲ್ಲೆಯಲ್ಲಿ ಎಸ್.ಐ.ಆರ್. ಕುರಿತು ಬಿಎಲ್‌ಒಗಳು ಮತದಾರರ ಮನೆಗೆ ಬಂದಾಗ ಅಗತ್ಯ ದಾಖಲಾತಿಗಳನ್ನು ನೀಡಿ, ಅವರಿಗೆ ಸಹಕಾರಿಸಬೇಕು. ಜಿಲ್ಲೆಯಲ್ಲಿ ಉತ್ತಮವಾದ ವಾತಾರಣವಿದೆ. ಮುಂದೆಯೂ ಇದೇ ರೀತಿಯಲ್ಲಿ ಸಾರ್ವಜನಿಕರು ಸಹಕಾರಿಸಬೇಕೆಂದರು.

ರಾಯಚೂರು ಮಹಾನಗರ ಪಾಲಕೆಯ ಆಯುಕ್ತರಾದ ಜುಬಿನ್ ಮೊಹೊಪಾತ್ರ ಅವರು ಮಾತನಾಡಿ, ಭಾತರ ಚುನಾವಣಾ ಆಯೋಗದ ನಿರ್ದೇಶದನದಂತೆ ಮತದಾರರ ಸಮಗ್ರ ಪರಿಷ್ಕರಣೆ ಕಾರ್ಯವು ಪ್ರಗತಿಯಲ್ಲಿದ್ದು, ರಾಯಚೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಶೇ.87ರಷ್ಟು ಪ್ರಗತಿ ಸಾಧಿಸಲಾಗಿದೆ. ಎಲ್ಲಾ ರಾಜಕೀಯ ಪಕ್ಷದ ಬೂತ್ ಏಜೆಂಟರಗಳು ನಮ್ಮೊಂದಿಗೆ ಕೈಜೋಡಿಸಬೇಕೆಂದರು.

ಇದಕ್ಕೂ ಮುಂಚೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್. ಕಾರ್ಯಕ್ರಮಕ್ಕೆ ಸಹಕಾರ ನೀಡುವ ಕುರಿತು ಹಸ್ತಾಕ್ಷರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ನಂತರ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರು ಸೇರಿದಂತೆ ವಿವಿಧ ಗಣ್ಯರು ಸೆಲ್ಫಿ ಸ್ಟ್ಯಾಂಡಿಗೆ ಫೋಟೋ ನೀಡಿದರು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಮಹಾನಗರ ಪಾಲಿಕೆ ಉಪ ಆಯುಕ್ತ ಶರಣಪ್ಪ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲ ಸಿದ್ದಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಡಾ.ಟಿ.ರೋಣಿ, ರಾಯಚೂರು ಮಹಾನಗರ ಪಾಲಿಕೆಯ ಸದಸ್ಯ ಕಾರ್ಯದರ್ಶಿ ಕೃಷ್ಣ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ರಾಯಚೂರು ತಹಸೀಲ್ದಾರ್ ಸುರೇಶ್ ವರ್ಮ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವೀರೇಶ್ ನಾಯಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸುರೇಶ ಜಿ., ಮಹಾನಗರ ಪಾಲಿಕೆಯ ಜೋನಲ್ ಆಯುಕ್ತ ಮಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

ಕಾರ್ಯಕ್ರಮದ ನಿರೂರ್ಪಣೆಯನ್ನು ಎಸ್‌ಐಆರ್ ಕಾರ್ಯಕ್ರಮದ ಸಂಯೋಜನಾ ಅಧಿಕಾರಿ ಡಾ.ದಂಡಪ್ಪ ಬಿರಾದಾರ್ ಅವರು ಮಾಡಿದರು.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology