ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371(ಜೆ) ಜಾರಿ ಮಾಡಿದರು.

ಯಾದಗಿರಿ.14.ಜೂನ್.25:- ನಾವು ಬಸವಣ್ಣನವರ ಆಶಯದ ಪ್ರಕಾರ ನುಡಿದಂತೆ ನಡೆಯುತ್ತೇವೆ. ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು .

ಬಿಜೆಪಿಯ ಮನೆ ದೇವರು. ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371(ಜೆ) ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371(ಜೆ) ಜಾರಿ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371(ಜೆ) ಜಾರಿ ಮಾಡಿದರು.

ಸಾಧನೆ ಮಾಡಿ ತೋರಿಸುತ್ತೇವೆ: ಸಿಎಂ

ನಾವು ಬಸವಣ್ಣನವರ ಆಶಯದ ಪ್ರಕಾರ ನುಡಿದಂತೆ ನಡೆಯುತ್ತೇವೆ. ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು ಸೇರಿ 200 ಭರವಸೆಗಳನ್ನು ನೀಡಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಎಲ್ಲಾ ಭರವಸೆಗಳನ್ನು ಭರವಸೆ ನೀಡಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಸಾಧಿಸಿ ತೋರಿಸುತ್ತೇವೆ.

ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿರುವುದು ಆರ್ಥಿಕವಾಗಿ ರಾಜ್ಯ ಪ್ರಗತಿ ಪಥದಲ್ಲಿರುವುದಕ್ಕೆ ಸಾಕ್ಷಿ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮನಮೋಹನ್ ಸಿಂಗ್ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಂವಿಧಾನ ತಿದ್ದುಪಡಿ ಮಾಡಿ 371 ಜೆ ಜಾರಿ ಮಾಡಿದರು. ಮಲ್ಲಿಕಾರ್ಜುನ ಖರ್ಗೆ, ದಿವಂಗತ ಧರಂ ಸಿಂಗ್ ಅವರ ಶ್ರಮ’ ಮತ್ತು ಹೋರಾಟ 371ಜೆ ಜಾರಿ ಹಿಂದೆ ಕೆಲಸ ಮಾಡಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿಯಲ್ಲಿ “ಆರೋಗ್ಯ ಆವಿಷ್ಕಾರ” ಯೋಜನೆಯಡಿ ₹440 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಪ್ರತಿ ವರ್ಷ KKRDB ಗೆ ₹5,000 ಕೋಟಿ ರೂ. ಕೊಡುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದೆವು. ನಮ್ಮ ಭರವಸೆಯಂತೆ ಇಲ್ಲಿಯವರೆಗೂ ₹13,000 ಕೋಟಿ ಹಣ ನೀಡಿದ್ದೇವೆ. ಇಲ್ಲಿಯವರೆಗೂ 5,300 ಕೋಟಿ ವೆಚ್ಚವಾಗಿತ್ತು, ಹಲವು ಕಾಮಗಾರಿಗಳ ಫಲ ಜನರಿಗೆ ತಲುಪಿದೆ. ಕೆ.ಕೆ.ಆರ್.ಡಿ.ಬಿ.ಗೆ ಕೊಡುವ ಈ ಅನುದಾನದ ಹೊರತಾಗಿ ಸರ್ಕಾರ ಈ ಭಾಗಕ್ಕೆ ಇಲಾಖಾವಾರು ಕಾರ್ಯಕ್ರಮಗಳಿಗೆ ಅನುದಾನ ನೀಡುತ್ತಲೇ ಇದೆ.

₹440.63 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ

ನಂಜುಂಡಪ್ಪ ಅವರ ವರದಿಯ ಆಶಯಗಳನ್ನು ನಮ್ಮ ಸರ್ಕಾರ ಮಾಡುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗದಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಸಾಧಿಸುವ ಜೊತೆಗೆ ಮೂಲಭೂತ ಸೌಕರ್ಯಗಳ ಯೋಜನೆಗೆ ಹಣ ವಿನಿಯೋಗ ಮಾಡಲು ಸೂಚನೆ ನೀಡಿದ್ದೇನೆ. ಇದರ ಪ್ರಕಾರ ಅಕ್ಷರ ಆವಿಷ್ಕಾರವು ಇಂದು ₹440.63 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

₹440.63 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ

ನಂಜುಂಡಪ್ಪ ಅವರ ವರದಿಯ ಆಶಯಗಳನ್ನು ನಮ್ಮ ಸರ್ಕಾರ ಮಾಡುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗದಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಸಾಧಿಸುವ ಜೊತೆಗೆ ಮೂಲಭೂತ ಸೌಕರ್ಯಗಳ ಯೋಜನೆಗೆ ಹಣ ವಿನಿಯೋಗ ಮಾಡಲು ಸೂಚನೆ ನೀಡಿದ್ದೇನೆ. ಇದರ ಪ್ರಕಾರ ಅಕ್ಷರ ಆವಿಷ್ಕಾರವು ಇಂದು ₹440.63 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

42 ಆಸ್ಪತ್ರೆಗಳು ಮೇಲ್ದರ್ಜೆಗೆ

ಕೊಲ್ಲೂರು ಮಲ್ಲಪ್ಪ ಅವರ ಸ್ಮಾರಕಕ್ಕೆ ಜಾಗ ಕೊಟ್ಟಿದ್ದೇವೆ. ಮಲ್ಲಪ್ಪ ಅವರು ಕಲ್ಯಾಣ ಕರ್ನಾಟಕದ ಗಾಂಧಿ ಎಂದು ಕರೆಸಿಕೊಂಡವರು. ಸ್ವಾತಂತ್ರ್ಯ ಹೋರಾಟಗಾರರಾದ ಇವರ ಸ್ಮಾರಕ ಆಗಬೇಕು ಎಂದು ಸೂಚನೆ ನೀಡಿದ್ದೇನೆ. 42 ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ, ಹೊಸ ಆಸ್ಪತ್ರೆಗಳ ನಿರ್ಮಾಣ ಆಗುತ್ತಿದೆ. ಈ ಭಾಗದ ಆರೋಗ್ಯ ಸವಲತ್ತು ವಿಸ್ತರಿಸಲು ಒಟ್ಟು ₹847 ಕೋಟಿ ಕೊಡಲು ಸರ್ಕಾರ ಯೋಜನೆ ರೂಪಿಸಿದೆ.

prajaprabhat

Recent Posts

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ : 2025-26ನೇ ಸಾಲಿನ ‘NMMSS’ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26 ನೇ ಶೈಕ್ಷಣಿಕ ಸಾಲಿಗೆ NMMS ವಿದ್ಯಾರ್ಥಿ ವೇತನಕ್ಕಾಗಿ, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP)…

2 hours ago

ಸರಕಾರಿ ಪದವಿ ಕಾಲೇಜುಗು ಈಗ ಖಾಸಗಿ ಕಾಲೇಜುಗಳಂತೆ : ಡಾ.ಎಂ.ಸಿ.ಸುಧಾಕರ್

ಚಿಕ್ಕಮಗಳೂರು.15.ಜೂನ್.25:- ರಾಜ್ಯ ಸರಕಾರ ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಖಾಸಗಿ ಕಾಲೇಜುಗಳಂತೆ…

2 hours ago

ಜೂ.16 ರಂದು ಎನ್‌ಎಬಿಎಲ್ ಮಾನ್ಯತೆ,<br>ಅದರ ಲಾಭಗಳು ಕುರಿತು ಜಾಗೃತಿ ಕಾರ್ಯಕ್ರಮ

ಬೀದರ.14.ಜೂನ್.25:- ಬೀದರ ತೋಟಗಾರಿಕೆ ಮಹಾವಿದ್ಯಾಲಯ, ರಿವರ್ಡ ಯೋಜನೆ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ, ರಾಷ್ಟ್ರೀಯ ಪರೀಕ್ಷೆ ಮತ್ತು ಅಂಶಶೋಧನಾ ಪ್ರಯೋಗಾಲಯಗಳ…

10 hours ago

ಜೂ.15 ರಿಂದ 17 ರವರೆಗೆ ವಿವಿಧ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಬೀದರ.14.ಜೂನ್.25:-ದಿನಾಂಕ: 15-06-2025 ರಿಂದ 17-06-2025 ರವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಓ/ತಾಂತ್ರಿಕ ಸಹಾಯಕರು ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ಹಾಗೂ ಗ್ರೂಪ್-ಬಿ ವೃಂದದ ಸಮನಾಂತರ…

10 hours ago

UGC NET 2025 ಪರೀಕ್ಷಾ ಪ್ರವೇಶ ಪತ್ರ  ಡೌನ್‌ಲೋಡ್ ಬಗ್ಗೆ ಮಾಹಿತಿ..

ಹೊಸ ದೆಹಲಿ.14.ಜೂನ್.25:- UGC NET 2025 ಪರೀಕ್ಷೆಯನ್ನು ಜೂನ್ 25 ರಿಂದ ಜೂನ್ 29, 2025 ರವರೆಗೆ ದೇಶಾದ್ಯಂತ ವಿವಿಧ…

14 hours ago

ಜೂನ್. 16 ರಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ

ಕೊಪ್ಪಳ. ಜೂನ್. 14.( ಕರ್ನಾಟಕ ವಾರ್ತೆ):- ಕಾನೂನು. ನ್ಯಾಯ. ಮಾನವ ಹಕ್ಕುಗಳು. ಸಂಸದೀಯ ವ್ಯವಹಾರ. ಶಾಸನ ರಚನೆ ಹಾಗೂ ಪ್ರವಾಸೋದ್ಯಮ…

14 hours ago