ಬೆಂಗಳೂರು.19.ಜೂನ್.25:- ರಾಜ್ಯ ಸರ್ಕಾರದಿಂದ ಈಗಾಗಲೇ ಆರೋಗ್ಯ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಟರ್ಮ್ ಇನ್ಸೂರೆನ್ಸ್ ಜಾರಿಗೊಳಿಸಿದೆ. ಈಗ ಸರ್ಕಾರ ಟರ್ಮ್ ಇನ್ಸೂರೆನ್ಸ್ ಸೌಲಭ್ಯ ನೀಡಿದೆ. ಅದೇ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.
ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಮೂರು ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೆ ಅನುಮೋದಿಸಲಾಗಿದೆ.
ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷದ ವರೆಗೆ ನಗದು ರಹಿತ ಆರೋಗ್ಯ ಯೋಜನೆಗಾಗಿ ಮಾಸಿಕ ಕುತಂಗಳಲ್ಲಿ ಸಿಬ್ಬಂದಿಗಳಿಂದ 100 ರೂಪಾಯಿ ಸಂಗ್ರಹಿಸಲು ಒಪ್ಪಿಗೆ ಸೂಚಿಸಿದೆ.
ಆರೋಗ್ಯ ಇಲಾಖೆಯ ಖಾಯಂ ಹಾಗೂ ಗುತ್ತಿಗೆ ಸಿಬ್ಬಂದಿ ಹಾಗೂ ಅವರ ಅವಲಂಬಿತರಿಗೆ ಈ ಯೋಜನೆಯ ಸೌಲಭ್ಯ ಲಭ್ಯವಾಗಲಿದೆ. ಹೀಗಾಗಿ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಇನ್ಮುಂದೆ ಐದು ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ದೊರೆತಂತೆ ಆಗಲಿದೆ.