Home » ಲೈವ್ ನ್ಯೂಸ್ » ಜೂ. 22ರಂದು ಸಚಿವ ಎನ್.ಎಸ್.ಭೋಸರಾಜು ಅವರ ಕೊಪ್ಪಳ ಜಿಲ್ಲಾ ಪ್ರವಾಸ

ಜೂ. 22ರಂದು ಸಚಿವ ಎನ್.ಎಸ್.ಭೋಸರಾಜು ಅವರ ಕೊಪ್ಪಳ ಜಿಲ್ಲಾ ಪ್ರವಾಸ

Facebook
X
WhatsApp
Telegram

ಕೊಪ್ಪಳ.20.ಜೂನ್.25:-ಕರ್ನಾಟಕ ವಿಧಾನ ಪರಿಷತ್ತಿನ ಸಭಾ ನಾಯಕರು ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ಜೂನ್ 22 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.


ಸಚಿವರು ಅಂದು ಬೆಳಗ್ಗೆ 7 ಗಂಟೆಗೆ ರಾಯಚೂರಿನಿಂದ ರಸ್ತೆಯ ಮೂಲಕ ಹೊರಟು, 11 ಗಂಟೆಗೆ ಕೊಪ್ಪಳ ಜಿಲ್ಲೆಯ ಕುಕನೂರು ನಿರೀಕ್ಷಣಾ ಮಂದಿರಕ್ಕೆ ಆಗಮಿಸುವರು. ಅಲ್ಲಿಂದ 11.15ಕ್ಕೆ ನಿರ್ಗಮಿಸಿ, ನಂತರ 11.30ಕ್ಕೆ ಶಿರೂರ ಗ್ರಾಮದಲ್ಲಿ ಕರ್ನಾಟಕ ನೀರಾವರಿ ನಿಗಮದ ಮುಖಾಂತರ ನಿರ್ಮಿಸಲಾಗಿರುವ ದಿ. ಕೆ.ಹೆಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.45ಕ್ಕೆ ಕುಕನೂರು ನಿರೀಕ್ಷಣಾ ಮಂದಿರಕ್ಕೆ ಆಗಮಿಸಿ, ಬಳಿಕ ಅಂದು ಮಧ್ಯಾಹ್ನ 3 ಗಂಟೆಗೆ ರಾಯಚೂರು ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology