ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿವಿಧ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಜೂ.24 ರಂದು ಬೆಳಿಗ್ಗೆ 09 ಗಂಟೆಗೆ ಇದೇ ಶಾಲೆಯಲ್ಲಿ ವಾಕ್ ಇನ್ ಇಂಟರ್ ವ್ಯೂ ಏರ್ಪಡಿಸಲಾಗಿದೆ.
ಅರ್ಹ ಅನುಭವವುಳ್ಳ 21 ರಿಂದ 60 ವರ್ಷ ವಯೋಮಿತಿಯೊಳಗಿನ ನವೋದಯ, ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ ಉಪನ್ಯಾಸ ಮಾಡಿದ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಖಾಲಿ ಹುದ್ದೆಗಳು :
1. ಜೀವಶಾಸ್ತ ಶಿಕ್ಷಕ-01,
2. ಇಂಗ್ಲೀಷ್ ಶಿಕ್ಷಕ-01,
3. ದೈಹಿಕ ಶಿಕ್ಷಕ(ಮಹಿಳೆ)-02.
4. ವಸತಿ ನಿಲಯಪಾಲಕ-01.
ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಶೈಕ್ಷಣಿಕ ದಾಖಲೆಗಳೊಂದಿಗೆ ನಿಗಧಿಪಡಿಸಿದ ದಿನದಂದು ಸಂದರ್ಶನಕ್ಕೆ ಹಾಜರಾಗಬಹುದು. ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ ಎಂದು ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಪರ್ಕ:
ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಅತಿಥಿ ಶಿಕ್ಷಕರ ನೇಮಕಾತಿಗೆ ನಾಳೆ ‘ವಾಕ್ ಇನ್ ಇಂಟರ್ ವ್ಯೂ’?