ಕೊಪ್ಪಳ.03.ಜುಲೈ.25: ಯಲಬುರ್ಗಾ ತಾಲ್ಲೂಕಿನ ಮಲಕಸಮುದ್ರ ಹಾಲಿ ವಸ್ತಿ ಯಲಬುರ್ಗಾ ಪಟ್ಟಣದ ಮಾನಶೆಟ್ಟರ ಕಾಲೋನಿ ನಿವಾಸಿ ಪ್ರಭು ಶೇಖಪ್ಪ ಮಂಟಗಾಣಿ ಎಂಬ 34 ವರ್ಷದ ವ್ಯಕ್ತಿಯು 2024 ರ ಅಕ್ಟೋಬರ್ 24 ರಿಂದ ಕಾಣೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯ ಚಹರೆ:
ವ್ಯಕ್ತಿಯು 5.2 ಅಡಿ ಎತ್ತರ, ಸದೃಢ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದಾಗ ಬಿಳಿ ಬಣ್ಣದ ತುಂಬು ತೋಳಿನ ಶರ್ಟ್ ಮತ್ತು ಕಂದು ಬಣ್ಣದ ಪ್ಯಾಂಟ್ ಧರಿಸಿದ್ದರು.
ಮೇಲ್ಕಂಡ ಚಹರೆಯ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಯಲಬುರ್ಗಾ ಪೊಲೀಸ್ ಠಾಣೆ ಪಿಎಸ್‌ಐ ಮೊ.ಸಂ. 9480803749, 08534-220133, ಕೊಪ್ಪಳ ಕಂಟ್ರೋಲ್ ರೂಂ. 08539-220222 ಗೆ ಸಂಪರ್ಕಿಸಿ ಮಾಹಿತಿ ನೀಡಬೇಕು. ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಯಲಬುರ್ಗಾ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.a
.
Nbde11