05/07/2025 3:29 PM

Translate Language

Home » ಲೈವ್ ನ್ಯೂಸ್ » ಮೆಟ್ರಿಕ್ ನಂತರದ ಕೋರ್ಸುಗಳ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ಕೋರ್ಸುಗಳ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

Facebook
X
WhatsApp
Telegram

ಕೊಪ್ಪಳ.03.ಜುಲೈ.25: 2025-26ನೇ ಸಾಲಿನ ಮೆಟ್ರಿಕ್ ನಂತರದ (ಪಿ.ಯು.ಸಿ, ಡಿಪ್ಲೋಮಾ, ಐ,ಟಿ,ಐ, ಪದವಿ ಮತ್ತು ಸ್ನಾತಕೋತ್ತರ ಪದವಿ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಯಡಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಎಸ್‌ಎಸ್‌ಪಿ ಪೋರ್ಟಲ್  https://ssp.karnataka.gov.in     ನಲ್ಲಿ ಸೆಪ್ಟೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಕಳೆದ ಸೆಮಿಸ್ಟರ್/ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು.

ಮೆಟ್ರಿಕ್ ನಂತರದ ಕೋರ್ಸುಗಳ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು  ರೂ.2 ಲಕ್ಷಗಳನ್ನು  ಮೀರಿರಬಾರದು. ವೃತ್ತಿಪರ ಹಾಗೂ ತಾಂತ್ರಿಕ ಕೋರ್ಸುಗಳಿಗೆ (ಮೆರಿಟ್-ಕಮ್-ಮೀನ್ಸ್) ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು  ರೂ.2.5 ಲಕ್ಷ ಮೀರಿರಬಾರದು. ಅರ್ಜಿ ಸಲ್ಲಿಸುವ ಪೂರ್ವದಲ್ಲಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿರುವ  (NPCI MAPPING ACTIVE)     ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು.


ಶುಲ್ಕ ಮರುಪಾವತಿಯ  ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂ ಮಾರ್ಗ ಸೂಚಿಗಳಿಗೆ ಒಳಪಟ್ಟಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ 

https://dom.karnataka.gov.in    

ಅನ್ನು ವೀಕ್ಷಿಸಬಹುದು ಹಾಗೂ ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ: 08539-225070, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕುಷ್ಟಗಿ: 8747861392, ಗಂಗಾವತಿ: 9986244408, ಯಲಬುರ್ಗಾ: 8095191406 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಅಜ್ಮೀರ್ ಅಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!