ಕೊಪ್ಪಳ.03.ಜುಲೈ.25: ಗಂಗಾವತಿ ವಿಧಾನಸಭಾ ಕ್ಷೇತ್ರದ 2025-26ನೇ ಸಾಲಿನ ದ್ವಿತೀಯ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜುಲೈ 7 ರಂದು ಬೆಳಗ್ಗೆ 10.30 ಗಂಟೆಗೆ ಗಂಗಾವತಿಯ ತಾಲೂಕ ಪಂಚಾಯತನ ಮಂಥನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬAಧಿಸಿದ ಅಧಿಕಾರಿಗಳು 2025-26ನೇ ಸಾಲಿನ ಏಪ್ರಿಲ್ ನಿಂದ ಜೂನ್ 2025ರ ಅಂತ್ಯದವರೆಗೆ ಸಾಧಿಸಿದ ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗುವಂತೆ ಗಂಗಾವತಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.