ರಾಜ್ಯದ ಕಾರ್ಮಿಕರ ಮಕ್ಕಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲಾ ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆ’ ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ನೀಡುವ ಯೋಜನೆಯು ಕಾರ್ಮಿಕರ ಮಕ್ಕಳ ಶಿಕ್ಷಣವನ್ನು ಬೆಂಬಲಿಸುವ ಒಂದು ಕಾರ್ಯಕ್ರಮವಾಗಿದೆ. ಈ ಯೋಜನೆಯಲ್ಲಿ, ಪ್ರೌಢಶಾಲೆ, ಪಿಯುಸಿ/ಡಿಪ್ಲೊಮಾ/ಐಟಿಐ, ಪದವಿ, ಸ್ನಾತಕೋತ್ತರ ಪದವಿ, ಮತ್ತು ಇಂಜಿನಿಯರಿಂಗ್/ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ.
ಈ ಯೋಜನೆಯಡಿಯಲ್ಲಿ, ವಿವಿಧ ಶಿಕ್ಷಣ ಹಂತಗಳಿಗೆ ನೀಡಲಾಗುವ ಪ್ರೋತ್ಸಾಹ ಧನದ ಮೊತ್ತ ಹೀಗಿದೆ:
ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಲಾ ಒಂದೊಂದು ‘ಶ್ರಮಿಕ ವಸತಿ ಶಾಲೆʼ ಆರಂಭಿಸಲು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ಶಾಲೆಗಳಿಗೆ ರೂ.1125.25 ಕೋಟಿ ಮಂಜೂರು ಮಾಡಲಾಗಿದೆ.
ಈ ಶಾಲೆಗಳು ಕಾರ್ಮಿಕರ ಮಕ್ಕಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯಗಳ ಜೊತೆಗೆ ವಸತಿಯನ್ನೂ ಒದಗಿಸುವುದರಿಂದ ಕಲಿಕೆಗೆ ಅನುಕೂಲವಾಗಲಿದೆ.