07/07/2025 8:33 PM

Translate Language

Home » ಲೈವ್ ನ್ಯೂಸ್ » ಶಾಸನಬದ್ಧ ಹುದ್ದೆಗಳ ನೇಮಕಾತಿಯಲ್ಲಿ ತಾರತಮ್ಯ ಮಾಡಲಾಗುತ್ತಿದೆ.ಪ್ರಾಧ್ಯಾಪಕರು ಗಂಭೀರ ಆರೋಪ ಮಾಡಿದ್ದಾರೆ.

ಶಾಸನಬದ್ಧ ಹುದ್ದೆಗಳ ನೇಮಕಾತಿಯಲ್ಲಿ ತಾರತಮ್ಯ ಮಾಡಲಾಗುತ್ತಿದೆ.ಪ್ರಾಧ್ಯಾಪಕರು ಗಂಭೀರ ಆರೋಪ ಮಾಡಿದ್ದಾರೆ.

Facebook
X
WhatsApp
Telegram

ಬೆಂಗಳೂರು.07.ಜುಲೈ.25:- ವಿಶ್ವವಿದ್ಯಾಲಯದ 10 ಜನ ದಲಿತ ಪ್ರಾಧ್ಯಾಪಕರು ಸಾಮೂಹಿಕ ರಾಜೀನಾಮೆ? ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿಯ ಶಿಕ್ಷಕರ ವಿರುದ್ಧ ವ್ಯವಸ್ಥಿತ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ಆರೋಪಿಸಿ, 10 ದಲಿತ ಪ್ರಾಧ್ಯಾಪಕರು ತಮ್ಮ ಆಡಳಿತಾತ್ಮಕ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಬರೆದ ಪತ್ರದಲ್ಲಿ, ಶಾಸನಬದ್ಧ ಹುದ್ದೆಗಳ ನೇಮಕಾತಿಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಪ್ರಾಧ್ಯಾಪಕರು ಗಂಭೀರ ಆರೋಪ ಮಾಡಿದ್ದಾರೆ.

ಪತ್ರದಲ್ಲಿ ತಮ್ಮ ಅಳಲನ್ನು ತೊಡಿಕೊಂಡ ಪ್ರಾಧ್ಯಾಪಕರು, ಕಳೆದ ಕೆಲವು ವರ್ಷಗಳಿಂದ ದಲಿತ ಶಿಕ್ಷಕರಾದ ನಾವು ಶೈಕ್ಷಣಿಕ ಜವಾಬ್ದಾರಿಗಳ ಜೊತೆಗೆ ಆಡಳಿತಾತ್ಮಕ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದೇವೆ. ಆದರೆ, ಶಾಶ್ವತ ಹುದ್ದೆಗಳ ನೇಮಕಾತಿಯಲ್ಲಿ ವಿಶ್ವವಿದ್ಯಾಲಯವು ದಲಿತರ ವಿರುದ್ಧ ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ ಎಂದು ಅವರು ದೂರಿದ್ದಾರೆ.

ಇದಲ್ಲದೆ, ನಮಗೆ ನೀಡಲಾದ ಆಡಳಿತಾತ್ಮಕ ಜವಾಬ್ದಾರಿಗಳನ್ನು ಕೇವಲ ‘ಮೇಲ್ವಿಚಾರಣೆ’ಗೆ ಸೀಮಿತಗೊಳಿಸಲಾಗಿದೆ. ಜೊತೆಗೆ, ನಮ್ಮ ಖಾತೆಗಳಿಗೆ ಜಮಾ ಆಗುತ್ತಿದ್ದ EL (Earned Leave) ಮೊತ್ತವನ್ನೂ ನಿಲ್ಲಿಸಲಾಗಿದೆ. ಈ ಬಗ್ಗೆ ಆಡಳಿತವನ್ನು ಹಲವು ಬಾರಿ ಮನವಿ ಮಾಡಿದರೂ, ನಮ್ಮ ಮನವಿ ನಿರ್ಲಕ್ಷಿಸಲಾಗಿದೆ ಎಂದು ಪ್ರಾಧ್ಯಾಪಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಮ್ಮ ಬೇಡಿಕೆಗಳನ್ನು ತಕ್ಷಣವೇ ಈಡೇರಿಸದಿದ್ದರೆ, ಈ ಪತ್ರವನ್ನು ನಮ್ಮ ಆಡಳಿತಾತ್ಮಕ ಹುದ್ದೆಗಳಿಗೆ ಔಪಚಾರಿಕ ರಾಜೀನಾಮೆಯಾಗಿ ಪರಿಗಣಿಸಬೇಕು ಎಂದು ಪ್ರಾಧ್ಯಾಪಕರು ತಿಳಿಸಿದ್ದಾರೆ. ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ, ಈ ಚಳುವಳಿಯನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ಘಟನೆಯಿಂದ ಬೆಂಗಳೂರು ವಿಶ್ವವಿದ್ಯಾಲಯದ ಆಡಳಿತದ ಮೇಲೆ ಒತ್ತಡ ಹೆಚ್ಚಾಗಿದ್ದು, ಈ ವಿವಾದದ ಮುಂದಿನ ಬೆಳವಣಿಗೆಗಳು ರಾಜ್ಯದ ಶೈಕ್ಷಣಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಲಿದೆ.

ವಿಶ್ವವಿದ್ಯಾಲಯದ ಆಡಳಿತವು ಈ ಆರೋಪಗಳಿಗೆ ಇನ್ನೂ ಪ್ರತಿಕ್ರಿಯಿಸಿಲ್ಲ. ಆದರೆ, ಈ ಸಾಮೂಹಿಕ ರಾಜೀನಾಮೆಯು ಶೈಕ್ಷಣಿಕ ಸಂಸ್ಥೆಗಳಲ್ಲಿ ಜಾತಿ ತಾರತಮ್ಯದ ಕುರಿತಾದ ದೊಡ್ಡ ಚರ್ಚೆಗೆ ಕಾರಣವಾಗಬಹುದು ಎಂದು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!