ಬೀದರ.09.ಜುಲೈ.25:- 2025-26ನೇ ಸಾಲಿನ ಸರ್ಕಾರಿ ಪಾಲಿಟೆಕ್ನಿಕ್ ಔರಾದ (ಬಾ) ನಲ್ಲಿ ಪ್ರರ್ಥಮ ವರ್ಷ ಡಿಪ್ಲೋಮಾ ಕೋರ್ಸುಗಳಿಗೆ ಹಾಗೂ ಲ್ಯಾಟರಲ್ ಎಂಟ್ರಿ 3ನೇ ಸೆಮಿಸ್ಟರ್‍ಗೆ ಪಾಲಿಟೆಕ್ನಿಕ್ ಕೋರ್ಸುಗಳಿಗೆ ಖಾಲಿ ಇರುವ ಸೀಟುಗಳಿಗೆ ಪ್ರವೇಶ ಅವದಿಯನ್ನುü ದಿನಾಂಕ: 15-07-2025 ರವರೆಗೆ ವಿಸ್ತರಿಸಲಾಗಿದೆ ಎಂದು ಔರಾದ (ಬಾ) ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇರವಾಗಿ ಕಾಲೇಜಿನಲ್ಲಿಯೇ ಆಫ್‍ಲೈನ್ ಮೂಲಕ ಪ್ರವೇಶ ಪಡೆಯಬಹುದಾಗಿದೆ. ಪ್ರಥಮ ವರ್ಷಕ್ಕೆ ಪ್ರವೇಶ ಪಡೆಯಲು ಎಸ್.ಎಸ್.ಎಲ್.ಸಿ. ಯಲ್ಲಿ ಕನಿಷ್ಠ 35% ಅಂಕ ಪಡೆದು ತೇರ್ಗಡೆ ಹೊಂದಿರಬೇಕು. ಹಾಗೂ ಲ್ಯಾಟರಲ್ ಎಂಟ್ರಿ 3ನೇ ಸೆಮಿಸ್ಟರ್‍ಗೆ ಪ್ರವೇಶ ಪಡೆಯಲು ಐಟಿಐ/ಪಿಯುಸಿ ವಿಜ್ಞಾನ ಪಾಸಾದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಔರಾದ (ಬಾ) ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರರನ್ನು ಹಾಗೂ ಮೊಬೈಲ್ ಸಂಖ್ಯೆ: 7899288998 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.