04/08/2025 11:52 PM

Translate Language

Home » ಲೈವ್ ನ್ಯೂಸ್ » 3 ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ; ಗ್ಯಾರಂಟಿ ಯೋಜನೆ ರದ್ದು: ಡಿ ಕೆ ಶಿವಕುಮಾರ್‌ ಸ್ಪಷ್ಟನೆ

3 ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ; ಗ್ಯಾರಂಟಿ ಯೋಜನೆ ರದ್ದು: ಡಿ ಕೆ ಶಿವಕುಮಾರ್‌ ಸ್ಪಷ್ಟನೆ

Facebook
X
WhatsApp
Telegram

ಬೆಂಗಳೂರು.14.ಜುಲೈ.25:- ರಾಜ್ಯ ಕಾಂಗ್ರೆಸ್‌ ನೀಡಿರುವ ಪಂಚಗೃಹಲಕ್ಷ್ಮಿ ಹಣ ಕೊಡ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅಧ್ಯಕ್ಷ ಹೆಚ್.ಎಂ ರೇವಣ್ಣ ಹೇಳಿದ್ದು, ಹಂತ ಹಂತವಾಗಿ ಈಗಾಗಲೇ ಪ್ರತಿ ತಿಂಗಳು ಹಣ ಕೊಡೋದಕ್ಕೆ ಕೆಲವು ತೊಡಕುಗಳಿವೆ. ಸದ್ಯ ಮೂರು ತಿಂಗಳಿಗೊಮ್ಮೆ ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎನ್ನುವ ಚರ್ಚೆ ಶುರುವಾಗಿದೆ ಹಾಗೂ ಗ್ಯಾರಂಟಿಗಳು ರದ್ದಾಗಲಿದೆ ಎಚ್ಚುವ ಚರ್ಚೆ ಶುರುವಾಗಿದೆ.

ಇದೀಗ ಗ್ಯಾರಂಟಿ ಯೋಜನೆಗಳ ಕುರಿತು ಡಿಸಿಎಂ ಡಿ ಕೆ ಶಿವಕುಮಾರ್‌ ಮಹತ್ವ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.

“ಶಕ್ತಿ” ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣ 500 ಕೋಟಿ ಟ್ರಿಪ್ ಮುಟ್ಟಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ವಿಂಡ್ಸರ್ ವೃತ್ತದಲ್ಲಿ ಬಿಎಂಟಿಸಿ ಬಸ್ ನಲ್ಲಿ 500 ನೇ ಕೋಟಿಯ ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಸೋಮವಾರ ವಿತರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ, ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಿಯವರೆಗೆ ದೇವರು ಶಕ್ತಿ ಹಾಗೂ ಜನ ಅಧಿಕಾರ ನೀಡುತ್ತಾರೋ ಅಲ್ಲಿಯತನಕ ಯೋಜನೆಗಳು ಮುಂದುವರೆಯುತ್ತವೆ ಎಂದರು.

500 ಕೋಟಿ ಟ್ರಿಪ್ ಗಳನ್ನು ಕಂಡಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ. ಕಾಂಗ್ರೆಸ್ ಪಕ್ಷ ಈ ದೇಶದ ಜನರಿಗೆ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ನೀಡಿದೆ. ಹಲಾವಾರು ಪಿಂಚಣಿ ಯೋಜನೆಗಳು, ನರೇಗಾ, ಬ್ಯಾಂಕ್ ರಾಷ್ಟ್ರೀಕರಣ ಸೇರಿದಂತೆ ನಮ್ಮ ಯೋಜನೆಗಳನ್ನು ಬಿಜೆಪಿ ಸೇರಿದಂತೆ ಯಾರೂ ಸಹ ನಿಲ್ಲಿಸಲು ಸಾಧ್ಯವಿಲ್ಲ. ಇವು ಜನರ ಹೃದಯ ಹಾಗೂ ಬದುಕಿಗೆ ಬೇಕಾದಂತಹ ಕಾರ್ಯಕ್ರಮಗಳು. ಇವು ನಿರಂತರವಾಗಿರುತ್ತವೆ ಎಂದು ಹೇಳಿದರು.

ಈ ಯೋಜನೆಯಿಂದ ರಾಜ್ಯದ ಉದ್ದಗಲಕ್ಕೂ ಮಹಿಳೆಯರು ಉಚಿತವಾಗಿ ಸಂಚಾರ ಮಾಡಬಹುದು. ಯಾವುದೇ ಖರ್ಚು ಮಾಡದೇ ತಮ್ಮ ಪ್ರೀತಿಪಾತ್ರರ ಮನೆಗಳಿಗೆ ಹೋಗಬಹುದು.‌ ಕೆಲಸಕ್ಕೆ ಹೋಗುವ ಅನೇಕ ಮಹಿಳೆಯರಿಗೆ ಪ್ರತಿ ತಿಂಗಳು 500 ರಿಂದ‌ 1 ಸಾವಿರಕ್ಕೂ ಹೆಚ್ಚು ಹಣ ಉಳಿತಾಯವಾಗುತ್ತಿದೆ ಎಂದು ಹೇಳಿದರು.

ಮಹಿಳೆಯೊಬ್ಬರು ಸಂತೋಷದಿಂದ ನನಗೆ ರೊಟ್ಟಿ, ಶೇಂಗಾ ಹೋಳಿಗೆ ನೀಡಿದರು. ನಮ್ಮ ಯೋಜನೆ ಬಗ್ಗೆ ಯಾರು ಎಷ್ಟೇ ಟೀಕೆ ಮಾಡಿದರೂ ಅವುಗಳು ಕಾಲಕ್ರಮೇಣ ಸತ್ತು ಹೋಗುತ್ತವೆ. ನಮ್ಮ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ.‌ ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿರುವ ಕಾರಣಕ್ಕೆ ನಮಗೆ ಹೆಚ್ಚು ಸಂತೋಷವಾಗಿದೆ. ಇದೆಲ್ಲವನ್ನು ಜಾರಿ ಮಾಡಲು ಜನ ನೀಡುರುವ ಶಕ್ತಿಯಿಂದ ನಮಗೆ ಬಲಬಂದಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಸಿಗಂದೂರು ನೂತನ ತೂಗುಸೇತುವೆ ಉದ್ಘಾಟನೆ ಸಂಬಂಧ ಮುಖ್ಯಮಂತ್ರಿಗಳ ಆಹ್ವಾನ ವಿವಾದದ ಕುರಿತು ಮಾತನಾಡಿ, ರಾಜ್ಯದ ಮುಖ್ಯಮಂತ್ರಿಗಳಿಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಅವರು ಪತ್ರ ಬರೆದು ತಿಳಿಸಿದ್ದಾರೆ. ಇಂದು ಇಂಡಿ ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೂ ಅತ್ಯಂತ ಪ್ರಮುಖವಾದುದು. 2 ಸಾವಿರ ಕೋಟಿಗೂ ಹೆಚ್ಚಿನ ಹಣವನ್ನು ನೀರಾವರಿ ಇಲಾಖೆಯಿಂದ ನೀಡಲಾಗುತ್ತಿದೆ ಎಂದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD