ಬೆಂಗಳೂರು.16.ಜುಲೈ.25:- ಕನ್ನಡ ಸಾಹಿತ್ಯ ಪರಿಷತ್ತು 2025-26ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
2025ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಈ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ₹50 ದಂಡ ಶುಲ್ಕದೊಂದಿಗೆ ಸೆ.30 ರವರೆಗೆ ಅರ್ಜಿ ಸಲ್ಲಿಸಬಹುದು.
ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ₹25 ಪಾವತಿಸಿ, ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿ ನಮೂನೆಯನ್ನು ಜುಲೈ 16ರಿಂದ ಪಡೆಯಬಹುದು. ಪರಿಷತ್ತಿನ ಹೆಸರಿಗೆ ₹65 ಮನಿಯಾರ್ಡರ್ ಮಾಡಿದರೆ ಅರ್ಜಿ ನಮೂನೆಯನ್ನು ಅಂಚೆ ಮೂಲಕ ಕಳುಹಿಸಲಾಗುತ್ತದೆ.
ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕವೂ ಪಡೆದುಕೊಳ್ಳಬಹುದು. ಪರೀಕ್ಷಾ ಶುಲ್ಕದೊಂದಿಗೆ ₹25 ಅರ್ಜಿ ಶುಲ್ಕವನ್ನು ಪ್ರತ್ಯೇಕವಾಗಿ ಪಾವತಿಸಬೇಕು ಎಂದು ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ. ಸಂಪರ್ಕಕ್ಕೆ: 080 26612991 ಅಥವಾ 224238567
ಕನ್ನಡ ಸಾಹಿತ್ಯ ಪರಿಷತ್ತು (Kannada Sahitya Parishat) ಕನ್ನಡ ಭಾಷೆ ಮತ್ತು ಸಾಹಿತ್ಯವನ್ನು ಅಭಿವೃದ್ಧಿಪಡಿಸಲು ಮತ್ತು ಸಂರಕ್ಷಿಸಲು ಸ್ಥಾಪಿಸಲಾದ ಒಂದು ಸಂಸ್ಥೆ. ಇದು ಕರ್ನಾಟಕದಲ್ಲಿದೆ ಮತ್ತು ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸುತ್ತದೆ.
ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಭಾಷೆ, ಸಾಹಿತ್ಯ, ಕಲೆ, ಜಾನಪದ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ಮತ್ತು ಸಂರಕ್ಷಿಸುವ ಗುರಿಯನ್ನು ಹೊಂದಿರುವ ಲಾಭೋದ್ದೇಶವಿಲ್ಲದ ಸಂಸ್ಥೆಯಾಗಿದೆ.
2 Comments
Exam ok
Thankyou