ಸಂಸತ್ತಿನ ಮಳೆಗಾಲದ ಅಧಿವೇಶನಕ್ಕೂ ಮುನ್ನ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ.
ಸೋಮವಾರದಿಂದ ಆರಂಭವಾಗಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನಕ್ಕೆ ಮುನ್ನ ಸರ್ಕಾರ ನಾಳೆ ಸರ್ವಪಕ್ಷ ಸಭೆ ಕರೆದಿದೆ. ಈ ಸಭೆಯಲ್ಲಿ, ಸಂಸತ್ತಿನ ಎರಡೂ ಸದನಗಳ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಎಲ್ಲಾ ರಾಜಕೀಯ ಪಕ್ಷಗಳಿಂದ ಸಹಕಾರವನ್ನು ಪಡೆಯಲಿದೆ. ಈ ತಿಂಗಳ 21 ರಿಂದ ಮುಂದಿನ ತಿಂಗಳ 21 ರವರೆಗೆ ಮಳೆಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ, ಹಲವಾರು ಪ್ರಮುಖ ಶಾಸನಗಳನ್ನು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.