ಬೀದರ.20.ಜುಲೈ.25:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಆಗಸ್ಟ್. 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರನ್ನು ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ದಿನಾಂಕ: 25-07-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ hಣಣಠಿs://sಚಿhiಣhಥಿಚಿಚಿಛಿಚಿಜemಥಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.