ಕೊಪ್ಪಳ.22.ಜುಲೈ25: 2025-26 ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್‌ನಲ್ಲಿ ವೃತ್ತಿಪರ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳು ಸೇವಾಸಿಂಧು ವೆಬ್ ಪೋರ್ಟಲ್ https://sevasindhu.karnataka.gov.in ನಲ್ಲಿ ಆಗಸ್ಟ್ 02 ರೊಳಗೆ ಅರ್ಜಿ ಸಲ್ಲಿಸಬೇಕು.
MULTI CUISINE COOK, F & B SERVICE ಮತ್ತು ENTERPRNEURSHIP PROGRAMER (EP) ಕೋರ್ಸುಗಳಿಗೆ 5 ತಿಂಗಳ ಅವಧಿಯ ತರಬೇತಿಯನ್ನು ನೀಡಲಾಗುತ್ತದೆ. 10ನೇ ತರಗತಿ ಉತ್ತೀರ್ಣರಾದ 18 ರಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ. 8 ಲಕ್ಷಕ್ಕಿಂತ ಮೀರಿರಬಾರದು.
ಅರ್ಜಿ ಸಲ್ಲಿಕೆ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್ : https://dom.karnataka.gov.in ಹಾಗೂ ಸಹಾಯವಾಣಿ: 8277799990, ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ: 8088894549, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಗಂಗಾವತಿ: 9986244408, ಕುಷ್ಟಗಿ: 8880482486, ಯಲಬುರ್ಗಾ: 8095191406 ವಿಳಾಸ ಮತ್ತು ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ರವಿ ಪೂಜಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.