ಕೊಪ್ಪಳ.22.ಜುಲೈ.25:- ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತಂದು ಫಲಾನುಭವಿಗಳಿಗೆ ತಲುಪಿಸಿ ಎಂದು ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಬಾಲಚಂದ್ರನ್ ಎಸ್. ಅವರು ಹೇಳಿದರು.
ಕೊಪ್ಪಳ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸೋಮವಾರಂದು ಹಮ್ಮಿಕೊಳ್ಳಲಾಗಿದ್ದ ಕೊಪ್ಪಳ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ತಹಶೀಲ್ದಾರ ವಿಠ್ಠಲ್ ಚೌಗಲಾ, ಸಮಿತಿ ಸದಸ್ಯರಾದ ದೇವರಾಜ ನಡುವಿನಮನಿ, ರಾಮಣ್ಣ ಚೌಡ್ಕಿ, ಜ್ಯೋತಿ ಗೊಂಡಬಾಳ, ಸವಿತಾ ಗೊರಂಟ್ಲಿ, ಅನ್ನದಾನಯ್ಯಸ್ವಾಮಿ, ಮೆಹಬೂಬಪಾಷಾ ಮಾನ್ವಿ, ಅನ್ವರ್ ಹುಸೇನ್ ಗಡಾದ, ಪರಶುರಾಮ ಕೊರವರ, ಆನಂದ ಕಿನ್ನಾಳ, ಲಕ್ಷö್ಮಣ ಡೊಳ್ಳಿನ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಇಲಾಖಾಧಿಕಾರಿಗಳು, ತಾಲ್ಲೂಕು ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.