03/08/2025 12:33 AM

Translate Language

Home » ಲೈವ್ ನ್ಯೂಸ್ » ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

Facebook
X
WhatsApp
Telegram

ಬೆಂಗಳೂರು.23.ಜುಲೈ.25:- ಕಾನೂನು ಪದವೀಧರರಿಗೆ ತರಬೇತಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ  ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಯು ಕುಟುಂಬದ ವಾರ್ಷಿಕ ಆದಾಯ (ತಂದೆ/ತಾಯಿ ಸೇರಿ) ರೂ.2.50 ಲಕ್ಷ ಮೀರಿರಬಾರದು. ತರಬೇತಿ ಅವಧಿ 2 ವರ್ಷಗಳಾಗಿದ್ದು, ಮಾಸಿಕ ರೂ.10,000/- ಗಳ ಶಿಷ್ಯವೇತನ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ / ಹಿರಿಯ ವಕೀಲರವರಲ್ಲಿ ತರಬೇತಿಗೆ ನೀಯೋಜಿಸಲಾಗುವುದು. ಬೆಂಗಳೂರು ನಗರ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಬಹುದು.

ಆಸಕ್ತ ಪರಿಶಿಷ್ಟ ವರ್ಗದ ಅಭ್ಯರ್ಥಿಗಳು ವೆಬ್ ಸೈಟ್  ನಲ್ಲಿ ಅರ್ಜಿಗಳನ್ನು ಸಲ್ಲಿ http://www.twd.karnataka.gov.in ಸಬಹುದು.

ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳ ಜೊತೆಗೆ ದಾಖಲಾತಿಗಳನ್ನು ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1, 1ನೇ ಮಹಡಿ, ಜೆಲ್ಲೇಟಾ ಟವರ್ಸ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-560027 ಇಲ್ಲಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22240449 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!