ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿರುವವರಿಗೆ ಸೇವಾ ಭದ್ರತೆ ಒದಗಿಸಲು ಯಾವುದೇ ಶಾಶ್ವತ ನಿಯಮಗಳಿಲ್ಲ. ಆದರೂ, ಅವರಿಗೆ ಗೌರವಧನ ನೀಡುವಲ್ಲಿ ಸರ್ಕಾರ ಕಾಲಕಾಲಕ್ಕೆ ಪರಿಷ್ಕರಣೆ ಮಾಡುತ್ತಿದೆ ಮತ್ತು ಪ್ರತಿವರ್ಷ ವಿದ್ಯಾರ್ಹತೆ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ, ಎಂದು ಮೂಲಗಳು ತಿಳಿಸಿವೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುವವರಿಗೆ ಸೇವಾ ಭದ್ರತೆ ಒದಗಿಸಲು ಶಾಶ್ವತ ನಿಯಮಾವಳಿ ರಚಿಸಲು ಸಮಿತಿ ರಚಿಸಲು ಅಗತ್ಯತೆ ಇಲ್ಲವೆಂದು ಆಯುಕ್ತರು ಹೇಳಿದ್ದಾರೆ. ಆದಾಗ್ಯೂ, 2024 ರಲ್ಲಿ ಅತಿಥಿ ಉಪನ್ಯಾಸಕರು ನಡೆಸಿದ ಧರಣಿ ಮತ್ತು ಪಾದಯಾತ್ರೆಯ ನಂತರ, ಸರ್ಕಾರವು 60 ವರ್ಷ ತುಂಬಿದವರಿಗೆ ಮತ್ತು ಮರಣ ಹೊಂದಿದವರಿಗೆ ₹5 ಲಕ್ಷ ಇಡುಗಂಟು ನೀಡುವ ಭರವಸೆ ನೀಡಿತ್ತು ಮತ್ತು ಆ ಭರವಸೆಯಂತೆ ಉನ್ನತ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ ಎಂದು ಆದೇಶ ಹೊರಡಿಸಿದೆ.
ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಮುಖ್ಯ ಸಮಸ್ಯೆಗಳೆಂದರೆ: ಸೇವಾ ಭದ್ರತೆಯ ಕೊರತೆ, ಕಡಿಮೆ ಗೌರವಧನ, ವಯಸ್ಸಾದ ನಂತರ ಉದ್ಯೋಗಾವಕಾಶಗಳ ಕೊರತೆ.
ಅನೇಕ ಅತಿಥಿ ಉಪನ್ಯಾಸಕರು ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿದ್ದರೂ, ಅವರಿಗೆ ಯಾವುದೇ ಭದ್ರತೆ ಇಲ್ಲ.
ವಯಸ್ಸಾದ ನಂತರ, ಅವರಿಗೆ ಬೇರೆ ಉದ್ಯೋಗ ಸಿಗುವುದು ಕಷ್ಟಕರವಾಗಿದೆ, ಆದ್ದರಿಂದ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಸಂಬಂಧಿಸಿದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಲವರು ಆಗ್ರಹಿಸುತ್ತಿದ್ದಾರೆ.
ಸೇವೆ ಭದ್ರತೆ ಕಲ್ಪಿಸಲು ಅವಕಾಶವಿಲ್ಲವೆಂದಿದ್ದ ಅಧಿಕಾರಶಾಹಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಸೇವಾ ಭದ್ರತೆ ಮತ್ತು ಶಾಶ್ವತ ನಿಯಮಾವಳಿ ರಚಿಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು 2017ರ ಡಿಸೆಂಬರ್ 22ರಂದು ಪತ್ರ ಬರೆದಿದ್ದರು. ಈ ಪತ್ರದಲ್ಲಿ ‘ ಉಪನ್ಯಾಸಕರುಗಳು ಇಲಾಖೆಯಲ್ಲಿ ಯಾವುದೇ ಮಂಜೂರಾದ ಖಾಲಿ ಹುದ್ದೆಗಳ ಎದುರಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಆದ್ದರಿಂದ ಅವರುಗಳ ತಾತ್ಕಾಲಿಕ ಸೇವೆಯನ್ನು ಪರಿಗಣಿಸಿ ಸೇವಾ ಭದ್ರತೆಯನ್ನು ಒದಗಿಸಿ, ಖಾಯಂ ಮಾಡಲು ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅವಕಾಶ ಇರುವುದಿಲ್ಲ’ ಎಂದು ವಿವರಿಸಿದ್ದರು.

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾಗಿದ್ದ ಡಾ ಸೋಮಶೇಖರ ಶಿಮೊಗ್ಗಿ ಅವರು ಸೇವಾ ಭದ್ರತೆ, ಶಾಶ್ವತ ನಿಯಮಾವಳಿ ರಚನೆ ಕುರಿತು ಮನವಿ ಸಲ್ಲಿಸಿದ್ದರು. ಇದನ್ನಾಧರಿಸಿ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸುವುದು ಸೂಕ್ತ ಮತ್ತು ಈ ಸಂಬಂಧ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಿಂದ ವರದಿ ಪಡೆಯಬೇಕು ಎಂದು ಉನ್ನತ ಶಿಕ್ಷಣ ಸಚಿವರಾಗಿದ್ದ ಬಸವರಾಜ ರಾಯರೆಡ್ಡಿ ಅವರು ಕಡತ ಮಂಡಿಸಲು ಸೂಚಿಸಿದ್ದರು.

ನ್ಯಾಯಮೂರ್ತಿ ಸಮಿತಿಯೇ ಬೇಡ ಎಂದಿದ್ದ ಆಯುಕ್ತರು
ತಾತ್ಕಾಲಿಕ ವ್ಯವಸ್ಥೆಯಡಿ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗೆ ಹಂಚಿಕೆಯಾದ ನಂತರ ಉಳಿಕೆ ಕಾರ್ಯಭಾರವನ್ನು ನಿರ್ವಹಿಸುತ್ತಿರುವ 93ධ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲವೆಂಬುದು ಸ್ಪಷ್ಟವಾಗಿರುತ್ತದೆ. ಅವರಿಗೆ ನೀಡುತ್ತಿರುವ ಮಾಸಿಕ ಗೌರವ ಧನದ ಮೊತ್ತವನ್ನು ಸರ್ಕಾರ ಕಾಲಕಾಲಕ್ಕೆ ಪರಿಷ್ಕರಿಸುತ್ತಾ ಬಂದಿದ್ದು ಪ್ರತಿ ವರ್ಷ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯನ್ನು ಸಹ ವಿದ್ಯಾರ್ಹತೆ ಆಧಾರದ ಮೇಲೆ ಹಾಗೂ ಈಗಾಗಲೇ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಪ್ರಾಧಾನ್ಯತೆ ನೀಡಿ ಆದಷ್ಟು ಪಾರದರ್ಶಕವಾಗಿ ಮಾಡಲಾಗುತ್ತಿದೆ. ಈ ಅಂಶಗಳ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಗೆ ಶಾಶ್ವತ ನಿಯಮಾವಳಿ ರಚಿಸಲು ಸಮಿತಿ ರಚಿಸಲು ಅಗತ್ಯತೆ ಕಂಡು ಬರುವುದಿಲ್ಲ

ಅದೇ ರೀತಿ ವಿಧಾನಪರಿಷತ್‌ನ ಜೆಡಿಎಸ್ ಸದಸ್ಯ ಕೆ ಟಿ ಶ್ರೀಕಂಠೇಗೌಡ ಅವರು ಸಹ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರಿಗೂ 2018ರ ಜೂನ್ 19ರಂದು ಪತ್ರ ಬರೆದಿದ್ದರು.
ರಾಜ್ಯದ ಪದವಿ ಕಾಲೇಜುಗಳಲ್ಲಿ ಕಳೆದ 15-20 ವರ್ಷಗಳಿಂದ 93ධ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದು ಸೇವಾ ಭದ್ರತೆ ಇಲ್ಲದೇ ಜೀವನ ನಡೆಸುವುದು ದುಸ್ತರವಾಗಿದೆ. ಇವರಲ್ಲಿ ಕೆಲವರಿಗೆ ವಯೋಮಿತಿ ಮೀರಿರುವುದರಿಂದ ಬೇರೆಲ್ಲೂ ನೇಮಕಾತಿಗೆ ಅವಕಾಶವಿಲ್ಲ. ಆದ್ದರಿಂದ ಅವರ ಸೇವೆಯನ್ನು ಮಾನವೀಯತೆಯ ಆಧಾರದ ಮೇಲೆ ವಿಶೇಷ ನಿಯಮಾವಳಿಗಳನ್ನು ರೂಪಿಸಿ ಅವರ ವಿದ್ಯಾರ್ಹತೆ ಅನಸುಆರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಸೇವಾ ವಿಲೀನ ಮಾಡುವುದರೊಂದಿಗೆ ಖಾಯಂ ಮಾಡಬೇಕು’ ಎಂದು ಕೋರಿದ್ದರು.
