ಬೀದರ.30.ಜುಲೈ.25:- ಆಗಸ್ಟ್.1 ರಂದು ವ್ಯವಸನಮುಕ್ತ ದಿನಾಚರಣೆಯ ಅಂಗವಾಗಿ ಶ್ರೀ ವಿಜಯ ಮಹಾಂತೇಶ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಬೀದರ ಹಾಗೂ ಜಿಲ್ಲಾಡಳಿತ ಮತ್ತು ಇತರೆ ಸಂಘ ಸಂಸ್ಥೆಗಳನ್ನು ಜೊತೆಗೂಡಿ ಶಾಲಾ ಕಾಲೇಜು ಮಟ್ಟದಲ್ಲಿ ಜುಲೈ.31 ರಂದು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಶ್ರೀ ವಿಜಯ ಮಹಾಂತೇಶ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಬಂಧ ಸ್ಪರ್ಧೆಗಳ ವಿವರ: ಜುಲೈ.31 ರಂದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ “ಯುವ ಜನಾಂಗ ಹಾಗೂ ದುಶ್ಚಟಗಳ ಪರಿಣಾಮಗಳು” ಹಾಗೂ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ “ದುರ್ವೇಸನಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಉಂಟಾಗುವ ಪರಿಣಾಮಗಳು” ವಿಷಯ ಕುರಿತು ಡಾ.ಪ್ರಶಾಂತ ಮಾಶೇಟ್ಟಿ ಬಿಸಿಎ, ಬಿಬಿಎ, ಬಿಎ ಮತ್ತು ಬಿ.ಕಾಮ ಡಿಗ್ರಿ ಕಾಲೇಜು ಬೀದರದಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ.
ಪಿಯು ಮತ್ತು ಪದವಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ವಿಜೇತರನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದ ವಿಜೇತರನ್ನು ಆಗಸ್ಟ್.1 ರಂದು ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಜರುಗುವ ವ್ಯಸನಮುಕ್ತ ದಿನಾಚರಣೆಯಲ್ಲಿ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಗುವುದು.
ತಮ್ಮ ಕಾಲೇಜಿನ ಆಸಕ್ತಿಯುಳ್ಳ ವಿದ್ಯಾರ್ಥಿಗಳು ದೂರವಾಣಿ ಸಂಖ್ಯೆ: 9035184365, 9035184366ಗೆ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.