03/08/2025 12:20 AM

Translate Language

Home » ಲೈವ್ ನ್ಯೂಸ್ » ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

Facebook
X
WhatsApp
Telegram

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು ಸೃಜಿಸಿ ಮಂಜೂರು ಮಾಡಲಾಗಿದೆ.ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ಕಾರ್ಪೊರೇಶನ್‌ ಅಸ್ತಿತ್ವಕ್ಕೆ ಬೇಕಾದ ಅಗತ್ಯ ಪ್ರಕ್ರಿಯೆ ಇನ್ನಷ್ಟು ಚುರುಕುಗೊಂಡಿದೆ.

ಸದ್ಯ ಕಾಯಂ ಹಾಗೂ ಹೊರಗುತ್ತಿಗೆಯಡಿ 470 ಜನ ಕೆಲಸ ನಿರ್ವಹಿಸುತ್ತಿದ್ದಾರೆ.

ಆಡಳಿತಕ್ಕಾಗಿ ಒಂದು ಹಾಗೂ ಇತರೆ ಉದ್ದೇಶಕ್ಕಾಗಿ ಎರಡು ಸೇರಿದಂತೆ ಒಟ್ಟು ಮೂರು ಉಪ ಆಯುಕ್ತರು, ಮುಖ್ಯ ಲೆಕ್ಕಾಧಿಕಾರಿ, ನಗರ ಯೋಜನಾ ಅಧಿಕಾರಿ ಸೇರಿದಂತೆ ಒಟ್ಟು 344 ಹುದ್ದೆಗಳು ಹೊಸದಾಗಿ ಸೇರ್ಪಡೆಯಾಗಲಿವೆ. ಎಲ್ಲ ಹುದ್ದೆಗಳ ನೇಮಕಾತಿಗೆ ಷರತ್ತು ವಿಧಿಸಲಾಗಿದೆ.

ಪಾಲಿಕೆಗೆ ಅಗತ್ಯವಿರುವ ಹುದ್ದೆಗಳಿಗೆ ನಿಯೋಜನೆ ಮೂಲಕ ಪಡೆಯತಕ್ಕದ್ದು. ಮುಂದಿನ ಮೂರು ವರ್ಷಗಳ ವರೆಗೆ ಯಾವುದೇ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳತಕ್ಕದ್ದಲ್ಲ. ಪಾಲಿಕೆಯ ಸ್ವಂತ ಸಂಪನ್ಮೂಲದಿಂದ ವೆಚ್ಚವನ್ನು ಭರಿಸುವ ಮೂಲಕ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಮಾನವ ಸಂಪನ್ಮೂಲವನ್ನು ನೇಮಿಸಿಕೊಳ್ಳಬಹುದು. ಪಾಲಿಕೆಯ ಆರ್ಥಿಕ ಸಾಮರ್ಥ್ಯದ ಆಧಾರದ ಮೇಲೆ ಪೌರಾಡಳಿತ ನಿರ್ದೇಶನಾಲಯವು ಪಾಲಿಕೆಗೆ ವೆಚ್ಚವನ್ನು ಭರಿಸಲು ಅನುಮತಿ ನೀಡಬಹುದು ಎಂದು ಷರತ್ತಿನಲ್ಲಿ ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.

ಬೀದರ್‌ ತಾಲ್ಲೂಕಿನ ಆರು ಗ್ರಾಮ ಪಂಚಾಯಿತಿಯ 16 ಗ್ರಾಮಗಳಿಗೆ ಸಂಬಂಧಿಸಿದ ಕಡತಗಳನ್ನು ಈಗಾಗಲೇ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಗಿದ್ದು, ಈ ಗ್ರಾಮಗಳು ಅಧಿಕೃತವಾಗಿ ಸೇರ್ಪಡೆಯಾಗಿವೆ.

10 ಎಕರೆಯಲ್ಲಿ ಹೊಸ ಕಟ್ಟಡ

ಬೀದರ್‌ ಮಹಾನಗರ ಪಾಲಿಕೆಯ ಕಟ್ಟಡ ನಿರ್ಮಾಣಕ್ಕೆ ಹೈದರಾಬಾದ್‌ ರಸ್ತೆಯ ನೂರ್‌ ಕಾಲೇಜು ಎದುರಿಗೆ 10 ಎಕರೆ ಜಾಗ ಮೀಸಲಿಡಲಾಗಿದೆ. ₹20 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲಾಗಿದ್ದು ಅದಕ್ಕೆ ಸರ್ಕಾರದಿಂದ ಅನುಮೋದನೆ ಸಿಗಬೇಕಿದೆ.

ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಶಿಥಿಲಗೊಂಡಿದ್ದು ಈಗಾಗಲೇ ಅಲ್ಲಿನ ಎಲ್ಲ ಕಚೇರಿಗಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಇದಕ್ಕೆ ಹೊಂದಿಕೊಂಡಿರುವ ಮಹಾನಗರ ಪಾಲಿಕೆ (ಬೀದರ್‌ ನಗರಸಭೆ) ಕಟ್ಟಡ ಕೂಡ ಇಷ್ಟರಲ್ಲೇ ಸ್ಥಳಾಂತರವಾಗಲಿದೆ.

ಈಗ ಜನ ಹೆಚ್ಚಿನ ಸಂಖ್ಯೆಯಲ್ಲಿ ಕಚೇರಿಗೆ ಬಂದು ತೆರಿಗೆ ಪಾವತಿಸುತ್ತಾರೆ. ಹಾಗಾಗಿ ಸದ್ಯ ಕಚೇರಿ ಬೇರೆಡೆಗೆ ಸ್ಥಳಾಂತರಿಸಿಲ್ಲ. ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ತೆರವು ಕೆಲಸ ಆರಂಭವಾದಾಗ ಪಾಲಿಕೆ ಕಟ್ಟಡ ಕೂಡ ತೆರವು ಮಾಡಲಾಗುತ್ತದೆ. ನಮಗೆ ಸೇರಿದ 10 ಎಕರೆ ಜಾಗವಿದ್ದು ₹20 ಕೋಟಿಯ ಪ್ರಸ್ತಾವ ಸಲ್ಲಿಸಲಾಗಿದೆ. ಅದು ನಿರ್ಮಾಣವಾಗುವವರೆಗೆ ತಾತ್ಕಾಲಿಕವಾದ ಕಟ್ಟಡದಲ್ಲಿ ಕೆಲಸ ನಿರ್ವಹಿಸಲಾಗುವುದು. ಮಹಾನಗರ ಪಾಲಿಕೆಗೆ ಯಾವ್ಯಾವ ಹುದ್ದೆಗಳು ಬೇಕು ಎಂಬುದನ್ನು ಗುರುತಿಸಿ ಆರ್ಥಿಕ ಇಲಾಖೆಯು ಪಟ್ಟಿ ಮಾಡಿ ಮಂಜೂರಾತಿ ನೀಡಿದೆ. ಇನ್ನಷ್ಟೇ ನೇಮಕ ಪ್ರಕ್ರಿಯೆ  ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!