ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 21 ತಾತ್ಕಾಲಿಕ ಹುದ್ದೆಗಳಿದ್ದು, ಅರ್ಹ ಹೊರಗುತ್ತಿಗೆ ಏಜೆನ್ಸಿಗಳು ಆಗಸ್ಟ್ 12ರ ಸಂಜೆ 5 ಗಂಟೆಯೊಳಗಾಗಿ ತಮ್ಮ ಅರ್ಜಿಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಕಛೇರಿ, ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮುಖ್ಯ ಆಡಳಿತ ಅಧಿಕಾರಿಗಳು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.