ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು. ಹಿಂದಿನ ಪ್ರಭಾರಿ ಅಪರ ಜಿಲ್ಲಾಧಿಕಾರಿ ಸುರೇಖಾ ಅವರು ಶಿವಾನಂದ ಬಿ.ಕರಾಳೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಶಿವಾನಂದ ಬಿ.ಕರಾಳೆ ಅವರು 2010ನೇ ಸಾಲಿನ ಕೆಎಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಕಾರವಾರ ಜಿಲ್ಲೆಯ ಸಹಾಯಕ ಆಯುಕ್ತರಾಗಿ ಹಾಗೂ ಅಪರ ಜಿಲ್ಲಾಧಿಕಾರಿಯಾಗಿ ಗದಗ, ಧಾರವಾಡ, ತುಮಕೂರ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ.