ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ನಿರ್ಗಮಿಸಿ 11.20ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೆರಾ ಏರ್ ಸ್ಟ್ರಿಪ್ ಗೆ ಆಗಮಿಸುವರು.
11.30ಕ್ಕೆ ಗಿಣಿಗೇರಾ ಏರ್ ಸ್ಟ್ರಿಪ್ ನಿಂದ ನಿರ್ಗಮಿಸಿ, ಮಧ್ಯಾಹ್ನ 12.5ಕ್ಕೆ ಲಿಂಗಸೂರ ತಾಲೂಕಿನ ಹಟ್ಟಿಯ ಕೇಂದ್ರೀಯ ವಿದ್ಯಾಲಯ ಆವರಣದಲ್ಲಿನ ಹೆಲಿಪ್ಯಾಡಗೆ ಆಗಮಿಸುವರು. ಬಳಿಕ ಹಟ್ಟಿ ಚಿನ್ನದ ಗಣಿ ಕ್ರೀಡಾಂಗಣದಲ್ಲಿ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದಿಂದ ನಡೆಯುವ ಹಟ್ಟಿ ಚಿನ್ನದ ಗಣಿ ಕಂಪನಿಯ ಸಿಬ್ಬಂದಿ ಹಾಗೂ ಕಾರ್ಮಿಕರ ವಸತಿ ಸಮುಚ್ಚಯ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
ಸಂಜೆ 4 ಗಂಟೆಗೆ ಹಟ್ಟಿಯ ಕೇಂದ್ರೀಯ ವಿದ್ಯಾಲಯ ಆವರಣದ ಹೆಲಿಪ್ಯಾಡನಿಂದ ಹೊರಟು ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರಸ್ಟ್ರಿಪ್ ಮಾರ್ಗವಾಗಿ ಬೆಂಗಳೂರಿನತ್ತ ಪ್ರಯಾಣ ಬೆಳೆಸುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳಾದ ಕೆ.ಚಿರಂಜೀವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.