ಬೀದರ.07.ಆಗಸ್ಟ್.25:- 2025-26ನೇ ಸಾಲಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಬಿವೃದ್ಧಿ ನಿಗಮ ಹಾಗೂ ಇದರ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿಗಮದಿಂದ ಸಾಲ ಮಂಜೂರು ಮಾಡಲು ಫಲಾಪೇಕ್ಷಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೆÇೀಸ್ಟ್ ಡಾಕ್ಟ್ರಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿಂಗ್ & ಟೆಕ್ನಾಲಜಿ, ಮ್ಯಾನೇಜ್ ಮೆಂಟ್ ಮತ್ತು ಕಾಮರ್ಸ್, ಸೈನ್ಸ್ ಮತ್ತು ಟೆಕ್ನಾಲಜಿ, ಅಗ್ರಿಕಲ್ಚರ್ & ಅಲೈಡ್ ಸೈನ್ಸಸ್/ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ ಮತ್ತು ಸೋಸಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 15.00ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. QS World Ranking 1000 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು. ವಾರ್ಷಿಕ ಗರಿಷ್ಠ 25.00 ಲಕ್ಷ ರೂ.ಗಳು ಹಾಗೂ ಪೂರ್ಣ ಕೋಸ್ರ್ನ ಅವಧಿಗೆ 50.00 ಲಕ್ಷ ರೂ.ಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು. ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ಜಾಮೀನುದಾರ/ಪೆÇೀಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು.
ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ (Offer Letter) ವಿದ್ಯಾರ್ಥಿಯ ವೀಸಾ ಪಾಸ್ ಪೆÇೀರ್ಟ್ ಮತ್ತು ಏರ್ ಟಿಕೇಟ್ ಪ್ರತಿ ಒದಗಿಸಬೇಕು. ಸ್ನಾತಕೋತ್ತರ ಕೋರ್ಸ್ ಗಳಿಗೆ ವಯೋಮಿತಿ 32, Phಜ ಕೋರ್ಸ್ ಗಳಿಗೆ 35 ವರ್ಷಗಳ ವಯೋಮಿತಿಯೊಳಗೆ ಇರಬೇಕು.
ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಯಾ ನಿಗಮಗಳ ವ್ಯಾಪ್ತಿಯಲ್ಲಿ ಬರುವ ಜನಾಂಗದವರು ಸಂಬಂಧಪಟ್ಟ ನಿಗಮಗಳಲ್ಲಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.dbcdc.karnataka.gov.in ಇಲ್ಲಿ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಂ. 9-8-15/5ಬಿ, ಬಿವ್ಹಿಬಿ ಕಾಲೇಜ ರಸ್ತೆ, ಮೈಲೂರ ಕ್ರಾಸ್, ಬಸವನಗರ-585403 ದೂರವಾಣಿ ಸಂ:08482-223515 ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.