ಬೆಂಗಳೂರು.08.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಉಪನ್ಯಾಸಕರು ಯುಜಿಸಿ ನಿಯಮಗಳ ಸಂಬಂಧಿತ ಅರ್ಹ ಹಾಗೂ ಆನ- ಅರ್ಹ ಅತಿಥಿ’ಗಳ ನೇಮಕಕ್ಕೆ ಕೋರ್ಟ್ ತಡೆ’
ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಮಾನದಂಡಗಳ ಪ್ರಕಾರ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಹೈಕೋರ್ಟ್ ಆದೇಶಿಸಿದೆ. ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.
ಪ್ರಕರಣದ ವಿಚಾರಣೆ ನಡೆಯುತ್ತಿರುವ ಕಾರಣ ನೇಮಕಾತಿ ವಿಳಂಬವಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಸಚಿವ ಎಂ.ಸಿ. ಸುಧಾಕರ್ ಅವರು ಮಾಹಿತಿ ನೀಡಿದರು.