ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಮತ್ತು ಫುಡ್ ಕಾರ್ಟ್ ಯೋಜನೆ, ಮೈಕ್ರೊ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಉದ್ಯಮ ಶೀಲತಾ ಅಭಿವದ್ಧಿ ಯೋಜನೆಯಡಿ ಬ್ಯಾಂಕುಗಳ ಸಹಯೋಗದೊಂದಿಗೆ ವ್ಯಾಪಾರ ಮತ್ತು ಇತರೇ ಉದ್ಯಮಗಳಿಗೆ ಸ್ವಾವಲಂಬಿ ಸಾರಥಿ ಮತ್ತು ಫುಡ್ ಕಾರ್ಟ್ ಯೋಜನೆ, ಸ್ವಯಂ ಉದ್ಯೋಗ (ನೇರಸಾಲ ಯೋಜನೆ) ಮತ್ತು ಮೈಕ್ರೊ ಕ್ರೆಡಿಟ್ ಪ್ರೇರಣಾ ಯೋಜನೆ ಅಡಿಯಲ್ಲಿ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ. ಉ.ಶೀ.ಯೋ. ಶೇಕಡಾ 70 ರಷ್ಟು ಸಹಾಯಧನ ಅಥವಾ ಗರಿಷ್ಟ ರೂ. 2 ಲಕ್ಷ, ಹೈನುಗಾರಿಕೆ ಯೋಜನೆ ಶೇಕಡಾ 50 ರಷ್ಟು ಸಹಾಯಧನ ಅಥವಾ ಗರಿಷ್ಟ ರೂ. 1.25 ಲಕ್ಷ ಆಗಿರುತ್ತದೆ.
ಸ್ವಾವಲಂಬಿ ಸಾರಥಿ ಮತ್ತು ಫುಡ್ ಕಾರ್ಟ್ ಯೋಜನೆಯಡಿ ಸರಕು ವಾಹನ ಟ್ಯಾಕ್ಸಿ, ಹಳದಿ ಬೋರ್ಡ ಖರೀದಿಸುವ ಉದ್ದೇಶಕ್ಕೆ ಸಾಲದ ಮೊತ್ತದ ಶೇಕಡಾ 75 ರಷ್ಟು ಅಥವಾ ಗರಿಷ್ಟ ರೂ. 4 ಲಕ್ಷ ಸಹಾಯಧನವಿದೆ. ಸ್ವಯಂ ಉದ್ಯೋಗ (ನೇರಸಾಲ ಯೋಜನೆ)ಯಡಿ ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತಿದ್ದು, ಘಟಕ ವೆಚ್ಚ ರೂ. 1 ಲಕ್ಷದಲ್ಲಿ ರೂ. 50 ಸಾವಿರ ಸಹಾಯಧನ ಮತ್ತು ಉಳಿತ ರೂ. 50 ಸಾವಿರ ಶೇಕಡಾ 4 ರಷ್ಟು ಬಡ್ಡಿ ದರದಲ್ಲಿ ಸಾಲವಿರುತ್ತದೆ.
ಮೈಕ್ರೊ ಕ್ರೆಡಿಟ್ ಪ್ರೇರಣಾ ಯೋಜನೆಯಡಿ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಕನಿಷ್ಟ 10 ಜನ ಸದಸ್ಯರು ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು. ಈ ಘಟಕ ವೆಚ್ಚ ರೂ. 5.00 ಲಕ್ಷವಿದ್ದು, ರೂ. 2.50 ಲಕ್ಷ ಸಹಾಯಧನ ಮತ್ತು ಬಾಕಿ ಉಳಿದ ರೂ. 2.50 ಲಕ್ಷ ಶೇಕಡಾ 4ರ ಬಡ್ಡಿ ದರದಲ್ಲಿ ಸಾಲದ ರೂಪದಲ್ಲಿ ನೀಡಲಾಗುವುದು.
ಭೂ ಒಡೆತನ ಯೋಜನೆಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕೆಲವು ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ನೀಡಲಾಗುವುದು. ಇದಕ್ಕಾಗಿ ಘಟಕ ವೆಚ್ಚ ರೂ. 25 ಅಥವಾ ರೂ. 20 ಲಕ್ಷ ಆಗಿದ್ದು, ಇದರಲ್ಲಿ ಶೇಕಡಾ 50 ರಷ್ಟು ಸಹಾಯಧನ ಮತ್ತು ಇನ್ನುಳಿದ ಶೇ.50ರಷ್ಟು ಶೆಕಡಾ 6 ರಷ್ಟು ಬಡ್ಡಿದರದಲ್ಲಿ ಸಾಲ ಇರುತ್ತದೆ.
ಗಂಗಾ ಕಲ್ಯಾಣ ಯೋಜನೆಯಡಿ 1.20 ಗುಂಟೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಕೊಳವೆ ಭಾವಿ ಕೊರೆದು ಪಂಪಸೆಟ್ ಅಳವಡಿಸಿ ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು. ಇದಕ್ಕಾಗಿ ಘಟಕ ವೆಚ್ಚ ರೂ. 4.75 ಲಕ್ಷ ಅಥವಾ ರೂ. 3.75 ಲಕ್ಷ ಆಗಿದ್ದು, ಇದರಲ್ಲಿ ರೂ. 50,000 ಸಾಲವು ಸೇರಿರುತ್ತದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನವಾಗಿದ್ದು, ಆಸಕ್ತು ಸೇವಾ ಸಿಂಧು ಪೋರ್ಟಲ್
https://SevaSindhu.karnataka.gov.in ನಲ್ಲಿ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಿದನಂತರ ಅದರ ಸ್ವೀಕೃತಿಯನ್ನು ಫಲಾನುಭವಿಗಳು ತಮ್ಮ ಬಳಿ ಇಟ್ಟುಕೊಳ್ಳುವುದು. ಆ ಸ್ವೀಕೃತಿಯ ಯಾವುದೇ ಪ್ರತಿ ಹಾಗೂ ಯಾವುದೇ ದಾಖಲಾತಿಗಳು ಜಿಲ್ಲಾ ಕಛೇರಿಗೆ ಸಲ್ಲಿಸುವ ಅಗತ್ಯ ಇರುವುದಿಲ್ಲ. ಮಂಡಳಿ ವಿವೇಚನಾ ಕೋಟಾ ಅಥವಾ ಸರಕಾರದ ಸಾಂಸ್ಥಿಕ ಕೋಟಾದಡಿ ಸ್ವೀಕರಿಸುವ ಅರ್ಜಿಗಳನ್ನು ಸಹ ಸುವಿಧಾ ಪೋರ್ಟಲ್ ಮೂಲಕವೇ ಮಾತ್ರ ಸಲ್ಲಿಸಬೇಕು. ಯಾವುದೇ ಸ್ವೀಕೃತಿ ಕಛೇರಿಗೆ ತೆಗೆದುಕೊಳ್ಳಲಾಗುವುದಿಲ್ಲ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವುದು, ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
ವಿವಿಧ ನಿಗಮಗಳಿಗೆ ಸಂಬಧಪಡುವ ಜಾತಿಗಳು ಆಯಾ ನಿಗಮದ ಅಡಿಯಲ್ಲಿ ಮಾತ್ರವೇ ಅರ್ಜಿ ಸಲ್ಲಿಸಬೇಕು.
ಬೇರೆ ನಿಗಮದಡಿ ಅರ್ಜಿ ಸಲ್ಲಿಸಿದ್ದಲ್ಲಿ ಹಾಗೂ ಅಭ್ಯರ್ಥಿಯು ಸಲ್ಲಿಸಿರುವ ಅರ್ಜಿ ಆ ನಿಗಮದಡಿ ಬರದೇ ಇದಲ್ಲಿ ಅದಕ್ಕೆ ನಿಗಮವು ಜವಾಬ್ದಾರಿಯಾಗಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಆಯಾ ನಿಗಮದ ವೆಬ್‌ಸೈಟ್‌ಗಳಾದ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ http://adcl.karnataka.gov.in & ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ http://kbdc.karnataka.gov.in & ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ http://ktdc.karnataka.nic.in ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ http://ksskdc.kar.nic.in ಗೆ ಸಂಪರ್ಕಿಸಬಹುದು.
2023-24 ಮತ್ತು 2024-25ನೇ ಸಾಲಿನಲ್ಲಿ ಈ ಯೋಜನೆಗಳಡಿ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ವಾಹನಗಳಿಗೆ ಸೌಲಬ್ಯ ಪಡೆಯಲು ಫಲಾಪೇಕ್ಷಿಗಳು ಖಡ್ಡಾಯವಾಗಿ ಡ್ರೆöÊವಿಂಗ್ ಲೈಸೆನ್ಸ್ ಹೊಂದಿರಬೇಕು. ಫುಡ್ ಕಾರ್ಟ್ ಉದ್ದೇಶಕ್ಕಾಗಿ ಜಿಲ್ಲಾ ಕೇಂದ್ರ ಅಥವಾ ನಗರ ಪ್ರದೆಶಗಳ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವ ಸಲುವಾಗಿ ಮಾತ್ರ ಬ್ಯಾಂಕುಗಳ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, 2ನೇ ಮಹಡಿ ಜಿಲ್ಲಾ ಆಡಳಿತ ಭವನ ರೂಂ ನಂಬರ 109, ಕೊಪ್ಪಳ, ಇಲ್ಲಿಗೆ ಅಥವಾ ದೂರವಾಣಿ ಸಂಖ್ಯೆ 8050854118, 8050854120 & 8050854119 ಗೆ ಸಂಪರ್ಕಿಸುವAತೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ತಿಳಿಸಿರುತ್ತಾರೆ.