ಕೊಪ್ಪಳ.13.ಆಗಸ್ಟ್.25: ವಿದೇಶಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ `ಸ್ಟಡಿ ಅಬ್ರಾಡ್’ ಕಾರ್ಯಕ್ರಮಕ್ಕೆ ಭಾಗವಹಿಸಲಿಚ್ಛೀಸುವ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸುವಂತೆ ಕೊಪ್ಪಳ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಗವಿಶಂಕರ್ ಅವರು ತಿಳಿಸಿದ್ದಾರೆ.
ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮ ನಿಯಮಿತ (ಕೆ.ವಿ.ಟಿ.ಎಸ್.ಡಿ.ಸಿ) ವತಿಯಿಂದ ಅಂತರಾಷ್ಟ್ರೀಯ ನೇಮಕಾತಿ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್ (STUDY ABROAD) ಕಾರ್ಯಕ್ರಮವನ್ನು ಆಗಸ್ಟ್ 17 ರಂದು ಬೆಂಗಳೂರಿನ ದಿ ಲಲಿತ್ ಅಶೋಕ ಹೋಟೆಲ್‌ನಲ್ಲಿ ಆಯೋಜಿಸಲಾಗಿರುತ್ತದೆ.
ಈ ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ವಿದೇಶಗಳ 60 ವಿಶ್ವವಿದ್ಯಾನಿಲಯಗಳು ಭಾಗವಹಿಸುತ್ತಿದ್ದು, ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ವಿದೇಶಿ ಅಧ್ಯಯನದ ಅವಕಾಶಗಳು, ಪ್ರವೇಶ ಪ್ರಕ್ರಿಯೆ, ವಿದ್ಯಾರ್ಥಿ ವೀಸಾ ಮಾಹಿತಿ ಮತ್ತು ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಒಂದೇ ವೇದಿಕೆಯಡಿ ಒದಗಿಸುವ ಅವಕಾಶವನ್ನು ಕಲ್ಪಿಸಲಾಗಿರುತ್ತದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತಹ ಆಸಕ್ತಿ ಇರುವ ವಿದ್ಯಾರ್ಥಿಗಳು ವೆಬ್‌ಸೈಟ್ :
https://studyabroad.ksdckarnataka.com/ ನಲ್ಲಿ ನೋಂದಣಿ ಮಾಡಿಕೊಂಡು ಭಾಗವಹಿಸಬಹುದಾಗಿ ಎಂದು ಪ್ರಕಟಣೆ ತಿಳಿಸಿದೆ.