ಕೊಪ್ಪಳ.24.ಡಿಸೆಂಬರ್.25: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರ್ಗೌಡ ಜಿ. ರಾಮತ್ನಾಳ್ ಅವರು ಡಿಸೆಂಬರ್ 24 ರಂದು ಕೊಪ್ಪಳದಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಡಿಸೆಂಬರ್ 24 ರಂದು ಬೆಳಿಗ್ಗೆ 8 ಗಂಟೆಗೆ ಹಿರೇಅರಳಿಹಳ್ಳಿಯಿಂದ ಹೊರಟು, ಬೆಳಗ್ಗೆ 10:30 ರಿಂದ ಮಧ್ಯಾಹ್ನ 2 ರವರೆಗೆ ಕೊಪ್ಪಳ ಜಿಲ್ಲಾ ಪಂಚಾಯತನ ಜಿ.ಹೆಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾದ ವಿ.ಆರ್.ಡಬ್ಲ್ಯೂ-ಎಂ.ಆರ್.ಡಬ್ಲ್ಯೂ ಮತ್ತು ಯು.ಆರ್.ಡಬ್ಲ್ಯೂ ನವರಿಗೆ ಆರ್.ಟಿ.ಇ ಪೋಕ್ಸೋ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಕುರಿತಾದ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದು. ಅಂದು ಮಧ್ಯಾಹ್ನ 2 ರಿಂದ ಸಂಜೆ 5 ರವರೆಗೆ ವಸತಿ ನಿಲಯ, ಶಾಲೆ, ಕೋಚಿಂಗ್ ಸೆಂಟರ್, ಪೊಲೀಸ್ ಠಾಣೆ, ಜಿಲ್ಲಾ ಆಸ್ಪತ್ರೆ ಮತ್ತು ಮಕ್ಕಳ ಪಾಲನಾ ಸಂಸ್ಥೆಗಳಿಗೆ ಭೇಟಿ ಹಾಗೂ ಪರಿಶೀಲನೆ ಮಾಡುವರು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ?