Home » ಲೈವ್ ನ್ಯೂಸ್ » ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಡಿಸೆಂಬರ್‌ 23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಡಿಸೆಂಬರ್‌ 23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

Facebook
X
WhatsApp
Telegram


ಭೂ ಪರಿವರ್ತನೆ ಈಗ ಸರಳ

ಇನ್ನು ಮುಂದೆ ಇವೆಲ್ಲವೂ ಸರಳೀಕರಣ….

ಬೆಂಗಳೂರು.26.ಡಿಸೆಂಬರ್.25: ರಾಜ್ಯ ಸರ್ಕಾರ ಇನ್ಮುಂದೆ ಮಾಸ್ಟರ್ ಪ್ಲಾನ್ ಪ್ರಕಾರ ಭೂ ಬಳಕೆಗೆ ಪರಿವರ್ತನೆ ಅವಶ್ಯಕತೆ ತೆಗೆದು ಹಾಕಲಾಗಿದೆ. ಇಂತಹ ಪ್ರಕರಣಗಳಲ್ಲಿ ನೇರವಾಗಿ ಪ್ಲಾನ್‌ ಅಪ್ರೂವಲ್‌ಗೆ ಹೋಗಬಹುದು.

⁠ಮಾಸ್ಟರ್ ಪ್ಲಾನ್ ಹೊರಗಿನ ಹಾಗೂ ಪರಿಭಾವಿತ ಭೂ ಪರಿವರ್ತನೆ (ಡೀಮ್ಡ್ ಕನ್ವರ್ಷನ್) ಈ ಹಿಂದೆ ಮೂರು ನಾಲ್ಕು ತಿಂಗಳು ಸಮಯ ತೆಗೆದುಕೊಳ್ಳುತ್ತಿತ್ತು. ಆದರೆ ಪ್ರಸ್ತುತ 30 ದಿನಗಳಲ್ಲಿ ಭೂ ಪರಿವರ್ತನೆ ಕಡ್ಡಾಯಗೊಳಿಸಲಾಗಿದೆ.

⁠ಭೂ ಪರಿವರ್ತನೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ  ನೀಡಲಾಗಿದೆ.

ಜಿಲ್ಲಾಧಿಕಾರಿಗಳು 30ದಿನಗಳ ಒಳಗಾಗಿ ಸಂಬಂಧಿತ ಯಾವುದೇ ಇಲಾಖೆಯ ಜೊತೆಗೆ ಚರ್ಚಿಸಿ ಭೂ ಪರಿವರ್ತನೆಗೆ ಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು.

⁠30 ದಿನಗಳ ಒಳಗಾಗಿ ಜಿಲ್ಲಾಧಿಕಾರಿಗಳು ಯಾವ ನಿರ್ಧಾರವೂ ತೆಗೆದುಕೊಳ್ಳದಿದ್ದಲ್ಲಿ, ಸ್ವಯಂ ಚಾಲಿತವಾಗಿ ಭೂ ಪರಿವರ್ತನೆಗೆ ಅವಕಾಶ ಲಭ್ಯವಾಗುತ್ತದೆ.

⁠ಸಣ್ಣ ಕೈಗಾರಿಕೆಗಳು ಎರಡು ಎಕರೆವರೆಗೆ ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತನೆ ಅಗತ್ಯ ಇಲ್ಲ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology