Home » ಲೈವ್ ನ್ಯೂಸ್ » ಇಂದು ಗ್ಯಾರಂಟಿ ಕಾರ್ಯಾಗಾರ-ಗ್ಯಾರಂಟಿ ಉತ್ಸವ ಕಾರ್ಯಕ್ರಮ

ಇಂದು ಗ್ಯಾರಂಟಿ ಕಾರ್ಯಾಗಾರ-ಗ್ಯಾರಂಟಿ ಉತ್ಸವ ಕಾರ್ಯಕ್ರಮ

Facebook
X
WhatsApp
Telegram

ಬೀದರ.29.ಡಿಸೆಂಬರ್.25:- ಬೀದರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಡಿಸೆಂಬರ್.30 ರಂದು ಬೆಳಿಗ್ಗೆ 11 ಗಂಟೆಗೆ ಘಾಳೆ ಲಕ್ಜುರೀಸ್ ಕನ್ವೆನ್ಷನ್ ಹಾಲ್, ಪ್ರತಾಪ್ ನಗರ, ನೌಬಾದ್ ಬೀದರದಲ್ಲಿ ಜಿಲ್ಲಾ ಮಟ್ಟದ “ಗ್ಯಾರಂಟಿ ಕಾರ್ಯಾಗಾರ-ಗ್ಯಾರಂಟಿ ಉತ್ಸವ” ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ವಹಿಸಲಿದ್ದಾರೆ.

ಕಾರ್ಯಕ್ರಮದ ಘನ ಉಪಸ್ಥಿತಿ ಕರ್ನಾಟಕ ರಾಜ್ಯ ಗ್ಯಾರಮಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೊಜ್ ಖಾನ್ ಅವರುಗಳು ವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ವಿಧಾನ ಪರಿಷತ್ ಶಾಸಕರು ಹಾಗೂ ಕರ್ನಾಟಕ ರಾಜ್ಯ ಗ್ಯಾರಮಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ ಗೂಳಿಗೌಡ, ಕರ್ನಾಟಕ ರಾಜ್ಯ ಗ್ಯಾರಮಟಿ ಯೊಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ, ಎಸ್.ಆರ್.ಪಾಟೇಲ್ ಬ್ಯಾಡಗಿ ಹಾಗೂ ಸೂರಜ್ ಹೆಗಡೆ ಅವರುಗಳು ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ಧಲಿಂಗಪ್ಪ ಎನ್.ಪಾಟೀಲ್ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ಬಿ.ನಾರಾಯಣರಾವ, ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಕೃಷ್ಣಾ ಮೇಲ್ದಂಡೆ ಯೋಜನೆ (ಕಾಡಾ) ಭೀಮರಾಯನಗುಡಿ, ಕಲಬುರಗಿಯ ಬಾಬು ಹೊನ್ನಾ ನಾಯಕ, ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ,  ಬೀದರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಭಾಲ್ಕಿ ತಾಲ್ಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಣಮಂತರಾವ ಚವ್ಹಾಣ, ಹುಮನಾಬಾದ ತಾಲ್ಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಹ್ಮದ ಮೈನೋದ್ದಿನ್,  ಬಸವಕಲ್ಯಾಣ ತಾಲ್ಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ನೀಲಕಂಠ ರಾಠೋಡ್,  ಬೀದರ ತಾಲ್ಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಹಮ್ಮದ ರಿಯಾಜ್, ಹುಲಸೂರ ತಾಲ್ಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಸಿದ್ರಾಮಪ್ಪಾ ಕಾಮಣ್ಣಾ,  ಚಿಟಗುಪ್ಪಾ ತಾಲ್ಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಸಂಗ್ರಾಮಪ್ಪಾ ಬಸವಣಪ್ಪಾ ಪಾಟೀಲ, ಔರಾದ (ಬಿ)ತಾಲ್ಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಉಪ್ಪೆ, ಕಮಲನಗರ ತಾಲ್ಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಆನಂದ ಚವ್ಹಾಣ ಹಾಗೂ ಉಪಾಧ್ಯಕ್ಷರು ಸರ್ವ ಸದಸ್ಯರು ಜಿಲ್ಲಾ ಮಟ್ಟದ/ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಲ ಅನುಷ್ಠಾನ ಸಮಿತಿ ಬೀದರ ಅವರುಗಳು ಭಾಗವಹಿಸಲಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology