ಬೆಂಗಳೂರು.02.ಜನವರಿ.25: ರಾಜ್ಯ ಸರಕಾರ ಇನ್ಮುಂದೆ ಕಾಲೇಜುಗಳಲ್ಲಿ ಹೆಣ್ಣುಮಕ್ಕಳಿಗೆ ಋತುಚಕ್ರ ರಜೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸೂಚನೆ ನೀಡಿದರೆ ರಜೆ ಘೋಷಣೆ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರಿಗೆ ಋತುಚಕ್ರ ರಜೆ ನೀಡುವ ವಿಚಾರದ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಾಲೇಜುಗಳಲ್ಲಿ ಹೆಣ್ಣುಮಕ್ಕಳಿಗೆ ರಜೆ ನೀಡುವ ಕುರಿತು ಸರ್ಕಾರ ಸಕಾರಾತ್ಮಕವಾಗಿದೆ ಎಂದು ಹೇಳಿದರು.
“ಕಾಲೇಜು ವಿದ್ಯಾರ್ಥಿನಿಯರು ಹಾಗೂ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ನೀಡಬೇಕೆಂಬುದಾಗಿ ಮುಖ್ಯಮಂತ್ರಿ ಸೂಚನೆ ನೀಡಿದರೆ, ಅದನ್ನು ಅನುಷ್ಠಾನಕ್ಕೆ ತರಲಾಗುತ್ತದೆ. ಈ ವಿಚಾರದಲ್ಲಿ ಸಿಎಂ ಆದೇಶವೇ ಅಂತಿಮ” ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಕೆಲಸ ನಿರ್ವಹಿಸೋ ಹೆಣ್ಣುಮಕ್ಕಳಿಗೆ ಋತುಚಕ್ರ ರಜೆ ನೀಡುವ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಾಲೇಜುಗಳಲ್ಲಿ ಹೆಣ್ಣುಮಕ್ಕಳಿಗೆ ರಜೆ ಕೊಡಬೇಕು ಅಂದರೆ ಕೊಡ್ತೀವಿ ಎಂದರು.
ಕಾಲೇಜು ವಿದ್ಯಾರ್ಥಿನಿಯಯರು, ವಿವಿ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ಕೊಡುವ ಬಗ್ಗೆ ಸಿಎಂ ಅವರು ಸೂಚನೆ ಕೊಟ್ಟರೆ ಮಾಡ್ತೀವಿ. ಸಿಎಂ ಆದೇಶವೇ ಅಂತಿಮ ಎಂದು ಸುಧಾಕರ್ ಹೇಳಿದರು.
ಮಹಿಳಾ ಸಾರಿಗೆ ನೌಕರರಿಗೆ ರಜೆ:
ಸಾರಿಗೆ ಇಲಾಖೆಯ ಮಹಿಳಾ ನೌಕರರಿಗೆ ಋತುಚಕ್ರದ ರಜೆಯನ್ನು ನೀಡಿ ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ಸರ್ಕಾರವು ಉಲ್ಲೇಖಿತ ಸರ್ಕಾರದ ಆದೇಶಗಳಲ್ಲಿ ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು ಮತ್ತು ನಿಬಂಧನೆಗೊಳಪಟ್ಟು ರಜೆ ಮಂಜೂರು ಮಾಡಲು ಆದೇಶಿಸಿರುತ್ತದೆ ಎಂದಿದ್ದಾರೆ.
ಸದರಿ ಆದೇಶವನ್ನು ನಿಗಮದಲ್ಲಿ ಅಳವಡಿಸಿಕೊಂಡಿದ್ದು, ಅದರಂತೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ 2026 ಜನವರಿ 1 ರಿಂದ ಜಾರಿಗೆ ಬರುವಂತೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಮಂಜೂರು ಮಾಡುವುದು ಎಂದು ಹೇಳಿದ್ದಾರೆ.
ಷರತ್ತುಗಳೇನು..?
1. ಋತುಚಕ್ರ ಹೊಂದಿರುವ 18 ರಿಂದ 52 ವಯಸ್ಸಿನ ನಿಗಮದ ಮಹಿಳಾ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.
2. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆ ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.
3. ಈ ರಜೆಯನ್ನು ರಜೆ/ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು.
4. ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸತಕ್ಕದ್ದಲ್ಲ. ಸದರಿ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು ಹಾಗೂ ಮುಂದಿನ ತಿಂಗಳಿಗೆ ವಿಸ್ತರಿಸಲು (carry over) ಅವಕಾಶವಿರುವುದಿಲ್ಲ.
ಈ ಸಂಬಂಧಪಟ್ಟವರೆಲ್ಲರೂ ಮೇಲಿನ ಆದೇಶವನ್ನು ಮನದಟ್ಟು ಮಾಡಿಕೊಂಡು ಅದರಂತೆ ಕ್ರಮ ಕೈಗೊಳ್ಳುವಂತೆ ಸಾರಿಗೆ ನಿಗಮಗಳಿಗೆ ಆದೇಶದಲ್ಲಿ ವ್ಯವಸ್ಥಾಪಕ ನಿರ್ದೇಶಕರು ಸೂಚಿಸಿದ್ದಾರೆ.






Any questions related to ಕಾಲೇಜುಗಳಲ್ಲಿ ಋತುಚಕ್ರ ರಜೆ ವಿಚಾರ: ಸಿಎಂ ಸೂಚನೆ ಬಂದರೆ ಜಾರಿ. ಉನ್ನತ ಶಿಕ್ಷಣ ಸಚಿವ.ಡಾ ಎಂ ಸಿ ಸುಧಾಕರ್?