Home » ಲೈವ್ ನ್ಯೂಸ್ » ಜನವರಿ 3ರಂದು ಲೋಕೋಪಯೋಗಿ ಸಚಿವರ ಪ್ರವಾಸ

ಜನವರಿ 3ರಂದು ಲೋಕೋಪಯೋಗಿ ಸಚಿವರ ಪ್ರವಾಸ

Facebook
X
WhatsApp
Telegram

ರಾಯಚೂರು.03.ಜನವರಿ.26: ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಅವರು 2026ರ ಜನವರಿ 3 ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಅoದು ಮಧ್ಯಾಹ್ನ 12.30ಕ್ಕೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಸಿಟಿ ಮುನಿಸಿಪಲ್ ಗ್ರೌಂಡ್ ಹೆಲಿಪ್ಯಾಡನಿಂದ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 3.30ಕ್ಕೆ ಸಿಂಧನೂರಿನ ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿನ ಹೆಲಿಪ್ಯಾಡಗೆ ಆಗಮಿಸಲಿದ್ದಾರೆ.

ಸಂಜೆ 4 ಗಂಟೆಗೆ ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದ ಶ್ರೀ ಅಂಬಾಮಠ ಆವರಣದಲ್ಲಿ ನಡೆಯುವ ಶ್ರೀ ಅಂಬಾದೇವಿಯ ಅಂಬಾರಿ ರಥೋತ್ಸವ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎನ್.ರಾಜಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology