|

ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ.

ಬೀದರ.03.ಜನವರಿ.26:- 2025-26ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೀದರ ಜಿಲ್ಲೆಯ ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಇವರಿಂದ ಅನುಷ್ಠಾನಗೊಳಿಸುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆ ಯುವ ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ ಕೆಲಸ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟ ಪದವಿ ತೇರ್ಗಡೆ ಹೊಂದಿರುವ, ಕನ್ನಡ ಸ್ಪಷ್ಠವಾಗಿ ಮಾತನಾಡುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಹಾಗೂ ಹುಮ್ಮಸ್ಸು, ಉತ್ತಮ ಅಂತರ್ವ್ಯಕ್ತೀಯ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರುವವರು ದಿನಾಂಕ: 15-01-2026 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಬೀದರ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಅಭ್ಯರ್ಥಿಗಳಿಗೆ ಮೊ=ದಲ ಆದ್ಯೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08482-227222 ಯುವ ಸಮಾಲೋಚಕರು ಬೀದರ ಮೊಬೈಲ್ ಸಂಖ್ಯೆ: 9886731405 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *