ಬೀದರ.06.ಜನವರಿ.26:- ಶೂನ್ಯ ಸಹಿಷ್ಣುತೆ ಹೊಂದಿರುವ ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತ್‍ಗಳಿಗೆ ಪ್ರತಿ ಜಿಲ್ಲೆಯಿಂದ ಒಂದು ಗ್ರಾಮ ಪಂಚಾಯತ್‍ಗೆ ರೂ. 25,000 ರಂತೆ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿರುತ್ತದೆ. ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪರಿಶೀಲನಾ ಹಾಗೂ ಶಿಫಾರಸ್ಸು ಸಮಿತಿಯನ್ನು ರಚಿಸಿ ಆದೇಶ ಹೊರಡಿಸಲಾಗಿರುತ್ತದೆ.
ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದ್ದರಿಂದ ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯತ್‍ಗೆ ಪ್ರಶಸ್ತಿ ನೀಡುವ ಸಲುವಾಗಿ ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯತ್‍ನ್ನು ಗುರುತಿಸಲು ಸರ್ಕಾರದಿಂದ ಹೊರಡಿಸಿರುವ ಆದೇಶದಲ್ಲಿ ನೀಡಿರುವ ಮಾರ್ಗಸೂಚಿಗಳು ಹಾಗೂ ಪ್ರಸ್ತಾವನೆಯನ್ನು ಸಲ್ಲಿಸಲು ಇರುವ ಅರ್ಜಿ ನಮೂನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ ಮೈಲೂರ ಬೀದರ ಅವರಿಂದ ಪಡೆಯಬಹುದಾಗಿದೆ.
ಈ ಪ್ರಸ್ತಾವನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮೈಲೂರ, ಬೀದರ ವಿಳಾಸಕ್ಕೆ ದಿನಾಂಕ: 31-01-2026 ರಂದು ರೊಳಗಾಗಿ ಸಲ್ಲಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಇ-ಮೇಲ್ ವಿಳಾಸ dcpobidar@gmail.com ದೂರವಾಣಿ ಸಂಖ್ಯೆ: 08482-234003/9481449719/9886235654 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.






Any questions related to ಬಾಲ್ಯ ವಿವಾಹ ಮುಕ್ತ ಗ್ರಾ.ಪಂಗಳಿಗೆ 25 ಸಾವಿರ ರೂ.ಬಹುಮಾನ: ಪ್ರಸ್ತಾವನೆ ಸಲ್ಲಿಸಲು ಅರ್ಜಿ ಆಹ್ವಾನ?