Home » ಲೈವ್ ನ್ಯೂಸ್ » ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ `ಶಿಶುಪಾಲನಾ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ `ಶಿಶುಪಾಲನಾ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

Facebook
X
WhatsApp
Telegram

ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಆದೇಶದಲ್ಲಿ ಬುದ್ಧಿಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ವೈದ್ಯಕೀಯ ಮಂಡಳಿಯ ಪ್ರಮಾಣ ಪತ್ರದ ಆಧಾರದ ಮೇಲೆ ಕೆಲವು ಷರತ್ತಿಗೊಳಪಟ್ಟು ಒಂದು ವರ್ಷದಲ್ಲಿ ಮೂರು ಕಂತುಗಳಿಗೆ ಮೀರದಂತೆ ಹಾಗೂ 15 ದಿನಗಳಿಗೆ ಕಡಿಮೆ ಇಲ್ಲದಂತೆ ಇಡೀ ಸೇವಾವಧಿಯಲ್ಲಿ ಎರಡು ವರ್ಷಗಳ ಅವಧಿಗೆ ಅಂದರೆ 730 ದಿನಗಳ ಶಿಶುಪಾಲನಾ ರಜೆಯನ್ನು ಮಂಜೂರು ಮಾಡಲಾಗಿದೆ.

ಪ್ರಸಕ್ತ ಸರ್ಕಾರವು 2021-22ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-37ರಲ್ಲಿ ರಾಜ್ಯ ಸರ್ಕಾರದ ಮಹಿಳಾ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನಾ ರಜೆಯನ್ನು ಘೋಷಿಸಿದ್ದು, ಈ ಕುರಿತಂತೆ ರಾಜ್ಯ ಸರ್ಕಾರವು ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಈ ಕೆಳಕಂಡ ಷರತ್ತುಗಳ ಮೇರೆಗೆ ಇಡೀ ಸೇವಾವಧಿಯಲ್ಲಿ ಗರಿಷ್ಟ ಆರು ತಿಂಗಳವರೆಗೆ ಅಂದರೆ 180 ದಿನಗಳ “ಶಿಶುಪಾಲನಾ ರಜೆ”ಯನ್ನು ರಜೆಯನ್ನು ಮಂಜೂರು ಮಾಡುವ ಸಕ್ತಮ ಪ್ರಾಧಿಕಾರವು ಮಂಜೂರು ಮಾಡತಕ್ಕದ್ದು.

i) ಮಹಿಳಾ ಸರ್ಕಾರಿ ನೌಕರಳು ಹೊಂದಿರುವ ಮಕ್ಕಳ ಸಂಖ್ಯೆಯನ್ನು ಪರಿಗಣಿಸದೆ, ಅತ್ಯಂತ ಕಿರಿಯ ಮಗುವು 18 ವರ್ಷ ತಲುಪುವವರೆಗಿನ ಅವಧಿಗೆ ಮಾತ್ರ ಈ ರಜೆಯ ಸೌಲಭ್ಯಕ್ಕೆ ಅರ್ಹರಾಗತಕ್ಕದ್ದು.

ii) ಈ ರಜೆಯ ಅವಧಿಯಲ್ಲಿ ಅವಳು ರಜೆಯ ಮೇಲೆ ಹೋಗುವ ನಿಕಟ ಪೂರ್ವದಲ್ಲಿ ಪಡೆಯಲರ್ಹವಿರುವ ಸಂಪೂರ್ಣ ವೇತನಕ್ಕೆ ಸಮನಾದ ರಜೆ ಸಂಬಳಕ್ಕೆ ಅರ್ಹರಾಗತಕ್ಕದ್ದು.

iii) ಪ್ರತಿ ಬಾರಿಯ ಈ ರಜೆ ಮಂಜೂರಾತಿಯು ಕನಿಷ್ಟ 15 ದಿನಗಳಿಗಿಂತ ಕಡಿಮೆ ಇರಬಾರದು.

iv) ಮಹಿಳಾ ಸರ್ಕಾರಿ ನೌಕರಳು ಈ ರಜೆಯನ್ನು ಸಾಂದರ್ಭಿಕ ರಜೆಯ ಹೊರತಾಗಿ, ನಿಯಮಾನುಸಾರ ಪಡೆಯಲರ್ಹವಿರುವ ಅಸಾಧಾರಣ ರಜೆಯೂ ಒಳಗೊಂಡಂತೆ ಇತರೆ ರಜೆಯೊಂದಿಗೆ ಸಂಯೋಜಿಸಿ ಪಡೆಯಬಹುದು.

v) ಈ ರಜೆಯನ್ನು ಯಾವುದೇ ರಜೆ ಲೆಕ್ಕದಿಂದ ಕಳೆಯತಕ್ಕದ್ದಲ್ಲ. ಉಪಯೋಗಿಸಿಕೊಳ್ಳದ ಈ ಸೌಲಭ್ಯದ ಸಂಬಂಧದಲ್ಲಿನ ರಜೆಯನ್ನು ಗಳಿಕೆ ರಜೆ ಲೆಕ್ಕಕ್ಕೆ ಜಮೆಗೊಳಿಸಲು/ನಗದೀಕರಿಸಲು ಅವಕಾಶವಿರುವುದಿಲ್ಲ.

vi) ಬುದ್ದಿಮಾಂದ್ಯ/ಅಂಗವಿಕಲ ಮಕ್ಕಳನ್ನು ಹೊಂದಿರುವ ಸರ್ಕಾರಿ ಮಹಿಳಾ ನೌಕರರಿಗೆ ಮಂಜೂರು ಮಾಡಿರುವ 730 ದಿನಗಳ ಶಿಶುಪಾಲನಾ ರಜೆ ಸೌಲಭ್ಯಕ್ಕೆ ಅರ್ಹರಾದ ಯಾವುದೇ ನೌಕರಳು ಆ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳತಕ್ಕದ್ದು. ಅದರೊಂದಿಗೆ ಈ ಯೋಜನೆಯಡಿಯಲ್ಲಿನ ಸೌಲಭ್ಯಕ್ಕೂ ಅರ್ಹರಾಗತಕ್ಕದ್ದಲ್ಲ.

vii) ಶಿಶುಪಾಲನಾ ರಜೆಯ ಮಂಜೂರಾತಿಗಾಗಿ ಯಾವುದೇ ಪೂರಕ ದಾಖಲೆಗಳನ್ನು ಪಡೆಯುವ ಅವಶ್ಯಕತೆಯಿರುವುದಿಲ್ಲ. ಸೇವಾ ಪುಸ್ತಕದಲ್ಲಿ ನಮೂದಿಸಿರುವ ಮಕ್ಕಳ ವಿವರಗಳ ಆಧಾರದ ಮೇಲೆ ಮಂಜೂರು ಮಾಡತಕ್ಕದ್ದು.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology