Home » ಲೈವ್ ನ್ಯೂಸ್ » SC/ST & OBC ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್|

SC/ST & OBC ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್|

Facebook
X
WhatsApp
Telegram

ಬೆಂಗಳೂರು.07.ಜನವರಿ.26: ಕೇಂದ್ರ ಸರ್ಕಾರ ವತಿಯಿಂದ ದೇಶದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಲಿ ಎಂದು ವಿದ್ಯಾರ್ಥಿವೇತನ ಘೋಷಣೆ ಮಾಡಿದೆ.

ದೇಶದ ಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಒಬಿಸಿ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ.

ಅರ್ಹತೆಗಳು ಏನೇನು?
ಅರ್ಜಿ ಸಲ್ಲಿಸುವವರು ಭಾರತೀಯ ಪ್ರಜೆಯಾಗಿರಬೇಕು ಹಾಗೂ ಶಾಲೆ, ಕಾಲೇಜು, ವಿವಿಗಳಲ್ಲಿ ಅಧ್ಯಯನ ಮಾಡುತ್ತಿರಬೇಕು. ಇದಕ್ಕೂ ಹಿಂದಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆಧಾರ್ ಕಾರ್ಡ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು ಎಂದು ತಿಳಿಸಲಾಗಿದೆ.

ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದವರಿಗೆ ಸಂಪೂರ್ಣ ಅಥವಾ ಭಾಗಶಃ ಟ್ಯೂಷನ್ ಫೀಸ್ ನೀಡಲಾಗುತ್ತದೆ. ವಿದ್ಯಾರ್ಥಿಗಳ ಜೀವನ ನಿರ್ವಹಣೆಯ ಮೊತ್ತವನ್ನು ನೀಡಲಾಗುತ್ತದೆ. ಹಾಸ್ಟೆಲ್ ಗಳಲ್ಲಿ ಇದ್ದರೆ, ಅವರಿಗೆ ಅದರ ಶುಲ್ಕವನ್ನು ನೀಡಲಾಗುತ್ತದೆ. ಪುಸ್ತಕ ಸೇರಿ ಅಧ್ಯಯನ ಸಾಮಗ್ರಿಗಳ ಖರೀದಿಗೆ ಹಣಕಾಸು ನೆರವು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ https://scholarships.gov.in. ವೆಬ್ ಸೈಟ್ ಗೆ ಭೇಟಿ ನೀಡಬೇಕು
ಆಧಾರ್ ಕಾರ್ಡ್ ಬಳಸಿ ರಿಜಿಸ್ಟರ್ ಮಾಡಿಕೊಳ್ಳಬೇಕು
ಇದಾದ ಬಳಿಕ ಅಗತ್ಯ ಮಾಹಿತಿ ಒದಗಿಸಿ ಲಾಗಿನ್ ಆಗಬೇಕು
ಎಸ್ಸಿ, ಎಸ್ಟಿ, ಒಬಿಸಿ ಸ್ಕಾಲರ್ ಶಿಪ್ ಯೋಜನೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology