Home » ಲೈವ್ ನ್ಯೂಸ್ » ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Facebook
X
WhatsApp
Telegram

ಬೀದರ.18.ಜನವರಿ.26:- ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ.26 ರ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೇ ಜನವರಿ.26 ರಂದು ಗಣರಾಜ್ಯೋತ್ಸವ ನಿಮಿತ್ಯ ಜನವರಿ.25 ಮತ್ತು 26 ರಂದು 2 ದಿವಸ ಸಂಘ-ಸoಸ್ಥೆಗಳು, ಸರ್ಕಾರಿ ಕಚೇರಿಗಳು ಎಲ್ಲಾ ಮಹನಿಯರ ವೃತ್ತದ ಮೇಲೆ ದೀಪಲಾಂಕಾರ ಮಾಡುವುದು. ಜನವರಿ.26 ರಂದು ಬೆಳಿಗ್ಗೆ 8 ಗಂಟೆಗೆ ಸರ್ಕಾರಿ-ಅರೆ ಸರ್ಕಾರಿ, ವಿವಿಧ ಶಾಲಾ ಕಾಲೇಜು ಮತ್ತು ಸಂಘ-ಸAಸ್ಥೆಗಳ ಮೇಲೆ ಧ್ವಜಾರೋಹಣ ನೆರವೇರಿಸಿ ನಂತರ ಎಲ್ಲಾ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳೊಂದಿಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಬೆಳಿಗ್ಗೆ 8:45 ಗಂಟೆಯೊಳಗೆ ಹಾಜರಾಗಬೇಕು.

ಬೆಳಿಗ್ಗೆ 9 ಗಂಟೆಗೆ ಬೀದರ ನಗರದ ನೇಹರು ಕ್ರೀಡಾಂಗಣದಲ್ಲಿ ಸಾರ್ವಜನಿಕವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಗುವುದು. ನೆಹರು ಕ್ರೀಡಾಂಗಣದಲ್ಲಿ ಜರುಗುವ ಪಥ ಸಂಚಲನ ಶಾಲಾ ಮಕ್ಕಳಿಂದ ಕವಾಯತ ಮತ್ತು ಇತ್ಯಾದಿ ಕಾರ್ಯಕ್ರಮಗಳನ್ನು ನಿಯಮಾನುಸಾರ ಅಚ್ಚು ಕಟ್ಟಾಗಿ ನೇರವೇರಿಸಲು ರಚಿಸಿದ ಉಪ ಸಮಿತಿಯ ಎಲ್ಲಾ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಶಿಕ್ಷಣ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ವ್ಯವಸ್ಥೆ ಮಾಡಬೇಕು. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹಾನೀಯರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಗಣರಾಜ್ಯೋತ್ಸವ ಅಂಗವಾಗಿ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮoದಿರದಲ್ಲಿ ಸಂಜೆ 5.30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಭೆಯಲ್ಲಿ ಬೀದರ ಮಹಾನಗರ ಪಾಲಿಕೆಯ ಆಯುಕ್ತರಾದ ಮುಕುಲ್ ಜೈನ್, ಬೀದರ ಸಹಾಯಕ ಆಯುಕ್ತರಾದ ಮೊಹಮ್ಮದ ಶಕೀಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಚಂದ್ರಕಾAತ ಪೂಜಾರ, ಸಂಘ-ಸoಸ್ಥೆ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology