Home » ಲೈವ್ ನ್ಯೂಸ್ » SC/ST ಮೀಸಲಾತಿ ಶೇ.50 ಹೆಚ್ಚಳಕ್ಕೆ ಆಕ್ಷೇಪವಿಲ್ಲ: ಹೈಕೋರ್ಟ್‌

SC/ST ಮೀಸಲಾತಿ ಶೇ.50 ಹೆಚ್ಚಳಕ್ಕೆ ಆಕ್ಷೇಪವಿಲ್ಲ: ಹೈಕೋರ್ಟ್‌

Facebook
X
WhatsApp
Telegram

ಬೆಂಗಳೂರು.21.ಜನೆವರಿ.26: ರಾಜ್ಯ  ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಶೇ.50ರ ಮೀಸಲಾತಿಯಲ್ಲಿ ನೇಮಕಾತಿ ಮುಂದುವರಿಸಿ, ಆದೇಶಗಳನ್ನು ವಿತರಿಸಲು ಅವಕಾಶ ಕಲ್ಪಿಸಲು ಅನುಮತಿ ಕೋರಿ ಸೂಕ್ತ ಅರ್ಜಿ ಸಲ್ಲಿಸುವುದಕ್ಕೆ ಹೈಕೋರ್ಟ್ ಅವಕಾಶ.

ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಗೆ ಇದ್ದ ಮೀಸಲಾತಿ ಪ್ರಮಾಣವನ್ನು ಶೇ.15ರಿಂದ 17 ಪರಿಶಿಷ್ಟ ಪಂಗಡದ ಪಂಗಡದ ಮೀಸಲಾತಿಯನ್ನು ಮೀಸಲ ಶೇ3 ರಿಂದ ಶೇ.7ರ ವರೆಗೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಕರ್ನಾಟಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ 2022ರ ಪ್ರಕಾರ ಜಾರಿಗೊಳಿಸಲಾಗಿತು.

ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಗೆ ಇದ್ದ ಮೀಸಲಾತಿ ಪ್ರಮಾಣವನ್ನು 15 ರಿಂದ 17ಕ್ಕೆ, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡ 3ರಿಂದ 7ರವರೆಗೂ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಕರ್ನಾಟಕ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ ಕಾಯ್ದೆ 2022 ಜಾರಿಗೊಳಿಸಿದ್ದು.

ಈ ಕಾಯ್ದೆ ಸಂವಿಧಾನ ಬಾಹಿರವಾಗಿದೆ. ಎಂದು ಆಕ್ಷೇಪಿಸಿ ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರ ಇತರರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ವಿಚಾರಣೆ ನಡೆದಿದೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಅವರು ಶೇಕಡ 50ರ ಮೀಸಲಾತಿ ಆಧರಿಸಿ ಹಲವು ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಮೀಸಲಾತಿ ಹೆಚ್ಚಿರುವುದರ ಅನುಸಾರ ಹೊಸದಾಗಿ ಯಾವುದೇ ನೇಮಕಾತಿ ಅಥವಾ ಬಡ್ತಿ ನೀಡುವಂತಿಲ್ಲ ಎಂದು 2025 ರ ನವೆಂಬರ್ 27ರಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಹೀಗಾಗಿ ಅರ್ಜಿಗಳನ್ನು ನ್ಯಾಯಾಲಯ ನಿರ್ಧರಿಸುವವರೆಗೆ ಹೆಚ್ಚುವರಿ ಶೇಕಡ 6 ಮೀಸಲಾತಿ ಅನ್ವಯಿಸುವುದಿಲ್ಲ. ಹೈಕೋರ್ಟ್ ಆದೇಶ ಜಾರಿಯಲ್ಲಿರುವುದರಿಂದ ಶೇಕಡ 50ರ ಮೀಸಲಾತಿ ಅನುಸಾರವೇ ನೇಮಕಾತಿ ಪ್ರಕ್ರಿಯೆ ಮುಂದುವರೆಸಿ ಆದೇಶ ವಿತರಿಸಲಾಗುವುದು.

ಉಳಿದ ಶೇಕಡ 6ಕ್ಕೆ ನ್ಯಾಯಾಲಯ ನಿರ್ಧಾರ ಮಾಡಿದ ನಂತರ ಆದೇಶ ನೀಡಲಾಗುವುದು. ಇದಕ್ಕೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ. ಆಗ ನ್ಯಾಯ ಪೀಠ ಸರ್ಕಾರ ಈ ಕುರಿತು ಸೂಕ್ತ ಅರ್ಜಿ ಸಲ್ಲಿಸಿದರೆ ಪರಿಶೀಲಿಸುವುದಾಗಿ ಹೇಳಿ ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದುವರಿದಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology