ಬೀದರ.21.ಜನವರಿ.26:- 2025-26ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಎನ್.ಐ.ಎಸ್. (Six Week Certificate Course, P.G. Diploma and M.S.C Sports Coaching) ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಯುಕ್ತ ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳು ಸಹಾಯಕ ನಿರ್ದೇಶಕರವರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಬೀದರ ಕಛೇರಿಗೆ ಭೇಟಿ ನೀಡಿ, ಅರ್ಜಿ ನಮೂನೆ ಪಡೆದು ದಿನಾಂಕ: 01-02-2026 ರೊಳಗಾಗಿ ಭರ್ತಿಮಾಡಿ ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ಸಲ್ಲಿಸುವಂತೆ ಅವರು ತಿಳಿಸಿದ್ದಾರೆ.






Any questions related to ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ?